ಬುಧವಾರ (ಏ.8)ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ಹೊಸ ಕೊರೊನಾ ಪಾಸಿಟಿವ್ ಕೇಸ್ ವರದಿಯಾಗಿಲ್ಲ. ಪರೀಕ್ಷೆ ನಡೆಸಿದ ಎಲ್ಲ ಏಳು ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷೆ ನೆಗೆಟಿವ್ ಬಂದಿದ್ದು, ಬುಧವಾರ 9 ಮಂದಿಯ ಗಂಟಲು ದ್ರವವನ್ನು ಪರೀಕ್ಷೆಗೆ ಕಳಿಸಲಾಗಿದೆ. 15 ಮಂದಿಯನ್ನು ನಿಗಾದಲ್ಲಿ ಇರಿಸಲಾಗಿದೆ.
ಈವರೆಗೆ 336 ನೆಗೆಟಿವ್, 12 ಪಾಸಿಟಿವ್ ಬಂದಿದ್ದು, ಅವರಲ್ಲಿ ನಾಲ್ವರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 3635 ಮಂದಿ ಹೋಂ ಕ್ವಾರಂಟೈನ್ ನಲ್ಲಿದ್ದು, ಇದುವರೆಗೆ 2311 ಮಂದಿ ಹೋಂ ಕ್ವಾರಂಟೈನ್ ಮುಗಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.