ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ನಲ್ಲೂರಂಗಡಿ ಬಸದಿಯಲ್ಲಿ ಎ.9 ರಂದು ನಡೆಯಲಿದ್ದ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಹಾಗೂ ಬಲಬಸದಿ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿಯ ಪ್ರತಿಷ್ಠಾ ಮಹೋತ್ಸವದ ದ್ವಿತೀಯ ವಾರ್ಷಿಕೋತ್ಸವವನ್ನು ಕೊರೊನಾ ವೈರಸ್ ಲಾಕ್ಡೌನ್ ಕಾರಣ ಮುಂದೂಡಲಾಗಿದೆ ಎಂದು ಸಮಿತಿ ಅಧ್ಯಕ್ಷ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ತಿಳಿಸಿದ್ದಾರೆ.