ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಲಾಕ್ ಡೌನ್ ಮಾಡಿದ ಕಾರಣ, ಗ್ರಾಮಮಟ್ಟದಲ್ಲಿ ರಚನೆಯಾದ ಟಾಸ್ಕ್ ಫೋರ್ಸ್ ಚಟುವಟಿಕೆಗಳ ಪ್ರಗತಿಯನ್ನು ಪರಿಶೀಲಿಸಲು ಗುರುವಾರ ಬಂಟ್ವಾಳ ಕ್ಷೇತ್ರದ ಮೂರು ಗ್ರಾಪಂಗಳಿಗೆ ಶಾಸಕ ರಾಜೇಶ್ ನಾಯ್ಕ್ ಭೇಟಿ ನೀಡಿದರು.
www.bantwalnews.com Editor: Harish Mambady
ನರಿಕೊಂಬು, ಬಾಳ್ತಿಲ ಮತ್ತು ಗೋಳ್ತಮಜಲು ಗ್ರಾಪಂಗಳಿಗೆ ಬೆಳಗ್ಗೆ ತೆರಳಿ, ಅಲ್ಲಿನ ಕಾರ್ಯವೈಖರಿಯನ್ನು ವೀಕ್ಷಿಸಿ, ಸಮಸ್ಯೆಗಳನ್ನು ಆಲಿಸಿದರು. ಈ ಸಂದರ್ಭ ರೇಷನ್ ವಿತರಣೆ ಸಹಿತ ಹಲವು ಸಮಸ್ಯೆಗಳಿಗೆ ಕೂಡಲೇ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಪಂ ಸದಸ್ಯೆ ಕಮಲಾಕ್ಷಿ ಪೂಜಾರಿ, ಬಂಟ್ವಾಳ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಬಂಟ್ವಾಳ ಆಹಾರ ಶಿರಸ್ತೇದಾರ್ ಶ್ರೀನಿವಾಸ್, ನರಿಕೊಂಬು ಗ್ರಾ.ಪಂ.ಅಧ್ಯಕ್ಷ ಯಶೋಧರ ಕರ್ಬೆಟ್ಟು, ಗೊಳ್ತಮಜಲು ಗ್ರಾ.ಪಂ.ಅಧ್ಯಕ್ಷೆ ಜಯಲಕ್ಷ್ಮೀ ಎಸ್, ಬಾಳ್ತಿಲ ಗ್ರಾ.ಪಂ.ಅಧ್ಯಕ್ಷ ವಿಠಲ, ಶಾಸಕರ ಆಪ್ತ ಸಹಾಯಕ ದಿನೇಶ್ ಸಹಿತ ಆಯಾ ಗ್ರಾಪಂಗಳ ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು, ಆರೋಗ್ಯ ಇಲಾಖೆ ಕಾರ್ಯಕರ್ತರು ಉಪಸ್ಥಿತರಿದ್ದರು.