ವಿಟ್ಲ

ವಿಟ್ಲ ಪೊಲೀಸರಿಗೆ ಲಯನ್ಸ್ ಕ್ಲಬ್ ನಿಂದ ಮಧ್ಯಾಹ್ನದ ಊಟ

ಕೊರೊನಾ ಮಹಾಮಾರಿಯಿಂದ ಲಾಕ್ಡೌನ್ ವೇಳೆ ಹಗಲು ರಾತ್ರಿ ಕರ್ತವ್ಯ ನಿರ್ವಹಿತ್ತಿರುವ ವಿಟ್ಲ ಪೊಲೀಸರಿಗೆ ವಿಟ್ಲ ಲಯನ್ಸ್ ಕ್ಲಬ್ ವತಿಯಿಂದ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಯಿತು.

ಜಾಹೀರಾತು

ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಹಾಗೂ ಸದಸ್ಯ ಲೂಯಿಸ್ ಮಸ್ಕರೇಂಞಸ್ ಅವರ ನೇತೃತ್ವದಲ್ಲಿ ವಿಟ್ಲ ಸುತ್ತಮುತ್ತಲಿನ ಸುಮಾರು 85ಕ್ಕೂ ಅಧಿಕ ಕುಟುಂಬಗಳಿಗೆ ದಿನಸಿ ಸಾಮಗ್ರಿ ವಿತರಿಸಲಾಗಿದೆ. ಇದೀಗ ಹಗಲು ರಾತ್ರಿ ಕೊರೊನಾ ಹೋರಾಟದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರಿಗೆ ಮಧ್ಯಾಹ್ನ ಊಟ ವ್ಯವಸ್ಥೆ ಕಲ್ಪಿಸಲಾಯಿತು. ವಿಟ್ಲ ಎಸೈ ವಿನೋದ್ ಕುಮಾರ್ ರೆಡ್ಡಿ ಅವರು ಚಾಲನೆ ನೀಡಿದರು. ಲಯನ್ಸ್ ಪ್ರಮುಖರಾದ ಡಾ. ಗೀತಪ್ರಕಾಶ್, ಸಂತೋಷ್ ಕುಮಾರ್ ಶೆಟ್ಟಿ ಪೆಲ್ತಡ್ಕ, ಮನೋಜ್ ಕುಮಾರ್ ರೈ, ಮಂಗೇಶ್ ಭಟ್ ವಿಟ್ಲ, ಗಂಗಾಧರ್, ರವಿಶಂಕರ್ ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.

www.bantwalnews.com Editor: Harish Mambady

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

2 hours ago