ಕಳೆದ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಲೇರಿಯಾ ಮತ್ತು ಡೆಂಘೆ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮ ಕೈಗೊಳ್ಳಬೇಕಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ರೂಪೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೊಳ್ಳೆ ಉತ್ಪಾದನಾ ಸ್ಥಳಗಳನ್ನು ಗುರುಸಿಸಿ, ಮುಂಜಾಗರೂಕತಾ ಕ್ರಮವಾಗಿ ನೀರು ನಿಲ್ಲದಂತೆ ಕ್ರಮ ವಹಿಸಲು ಸಾರ್ವಜನಿಕರಿಗೆ ಸೂಚಿಸಲಾಗಿದೆ. ತಮ್ಮ ಮನೆಯ ಮೇಲ್ಛಾವಣಿ, ನೀರಿನ ಟ್ಯಾಂಕುಗಳಲ್ಲಿ, ಫ್ರಿಡ್ಜ್ ನ ಹಿಂಭಾಗ, ಹೂಕುಂಡಗಳು ಇತ್ಯಾದಿ ಸ್ಥಳಗಳಲ್ಲಿ ಶುದ್ಧವಾದ ನೀರು ನಿಲ್ಲದಂತೆ ಕ್ರಮ ವಹಿಸುವುದು, ಮನೆ ಆವರಣ ಶುಚಿಯಾಗಿಟ್ಟುಕೊಳ್ಳಬೇಕು ಎಂದು ಸೂಚಿಸಿದ್ದಾರೆ. ಸೊಳ್ಳೆ ನಿರೋಧಕ ಬಳಸಲು ಕೋರಲಾಗಿದ್ದು, ಸೊಳ್ಳೆ ಉತ್ಪತ್ತಿ ತಾಣಗಳನ್ನು ಗುರುತಿಸಿ, ಅವುಗಳನ್ನು ನಾಶಪಡಿಸುವ ಕಾರ್ಯವನ್ನು ಆಶಾ ಕಾರ್ಯಕರ್ತೆಯರು, ಮನಪಾ ಎಂಪಿಡಬ್ಲ್ಯು ಕಾರ್ಯಕರ್ತರು ನಡೆಸುವ ಕಾರಣ, ಮನೆಗೆ ಭೇಟಿ ನೀಡುವ ಆಶಾ ಕಾರ್ಯಕರ್ತೆಯರಿಗೆ ಮತ್ತು ಎಂಪಿಡಬ್ಲ್ಯು ಕಾರ್ಯಕರ್ತರಿಗೆ ಸಂಪೂರ್ಣ ಸಹಕಾರ ನೀಡಲು ಅವರು ಕೋರಿದ್ದಾರೆ.
Be the first to comment on "ಡೆಂಘೆ, ಮಲೇರಿಯಾ: ಮುನ್ನೆಚ್ಚರಿಕೆ ಅಗತ್ಯ – ಜಿಲ್ಲಾಧಿಕಾರಿ"