ಕೋವಿಡ್ ನಿಂದ ತೊಂದರೆಗೊಳಗಾದ ಜನರಿಗೆ ಬಂಟ್ವಾಳ ತಾಲೂಕಿನ ಒಡಿಯೂರು ಶ್ರೀಗುರುದೇವಾನಂದ ಸ್ವಾಮೀಜಿ ಸ್ಪಂದಿಸಿದ್ದಾರೆ.
ಕರೋನಾ (ಕೋವಿಡ್-೧೯)ದ ಪರಿಣಾಮ ಲಾಕ್‌ಡೌನ್‌ನಿಂದಾಗಿ ತೊಂದರೆಗೀಡಾದ ಜನತೆಗೆ ಸ್ಪಂದಿಸಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಿಂದ ಶ್ರೀ ಗುರುದೇವಾನಂದ ಸ್ವಾಮಿಗಳವರು ಕರೋಪಾಡಿ ಗ್ರಾಮದ ಸಾವಿರಕ್ಕೂ ಮಿಕ್ಕಿ ಮನೆಗಳಿಗೆ ಅಕ್ಕಿ, ಸಕ್ಕರೆ, ಚಾಹುಡಿ, ಸಾಂಬಾರುಹುಡಿ ಇತ್ಯಾದಿ ದಿನ ಬಳಕೆಯ ವಸ್ತುಗಳನ್ನು ವಿತರಿಸಿದರು.
ಜಾಹೀರಾತು
ಸಕಾಲದಲ್ಲಿ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ನಿರ್ದೇಶಕರಾದ ಕಿರಣ್ ಉರ್ವ, ಕರೋಪಾಡಿ ಗ್ರಾಮ ಸಮಿತಿಯ ಅಧ್ಯಕ್ಷ ರಘುರಾಮ ಶೆಟ್ಟಿ ಪಟ್ಲಗುತ್ತು, ಬಂಟ್ವಾಳ ತಾಲೂಕು ವಿಸ್ತರಣಾಧಿಕಾರಿ ಸದಾಶಿವ ಅಳಿಕೆ, ಸುಬ್ರಾಯ ದೇವಸ್ಥಾನ, ವಗೆನಾಡು ಕ್ಷೇತ್ರ ನಿರ್ವಹಣಾ ಸಮಿತಿಯ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಅನೆಯಾಲಗುತ್ತು, ಶ್ರೀ ಸಂಸ್ಥಾನದ ಕಾರ್ಯನಿರ್ವಾಹಕ ಪದ್ಮನಾಭ ಒಡಿಯೂರು ಹಾಗೂ ಗ್ರಾಮ ಬಂಧುಗಳು ಮತ್ತು ಶ್ರೀ ಸಂಸ್ಥಾನದ ಕಾರ್ಯಕರ್ತರು ಸಹಕರಿಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಲಾಕ್ ಡೌನ್ ನಿಂದ ತೊಂದರೆಗೊಳಗಾದವರಿಗೆ ಒಡಿಯೂರು ಶ್ರೀ ಸಂಸ್ಥಾನದ ನೆರವು"
Be the first to comment on "ಲಾಕ್ ಡೌನ್ ನಿಂದ ತೊಂದರೆಗೊಳಗಾದವರಿಗೆ ಒಡಿಯೂರು ಶ್ರೀ ಸಂಸ್ಥಾನದ ನೆರವು"