ವಿಟ್ಲ

ಬೆಂಗಳೂರಿನಿಂದ ವಿಟ್ಲಕ್ಕೆ ಕಾಲ್ನಡಿಗೆಯಲ್ಲಿ ಬಂದ ಮಹಿಳೆಯರು

ಲಾಕ್ ಡೌನ್ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಮಹಾರಾಷ್ಟ್ರ ಮೂಲಕ ಮೂವರು ಮಹಿಳೆಯರು ಕಾಲ್ನಡಿಗೆಯಲ್ಲಿ ನಡೆಯುತ್ತಾ ಬಂದು ಸೋಮವಾರ ವಿಟ್ಲ ತಲುಪಿದರು. ಬಳಿಕ ವಿಟ್ಲ ಎಸೈ ವಿನೋದ್ ಕುಮಾರ್ ರೆಡ್ಡಿ ಅವರು ಮೂವರು ಮಹಿಳೆಯರನ್ನು ವಿಟ್ಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಆಶ್ರಯ ನೀಡಿದರು.

ಜಾಹೀರಾತು

ನಾಸಿಕ್ ಮೂಲದ ಇಬ್ಬರು ವೃದ್ಧೆಯರು ಹಾಗೂ ಒಬ್ಬಳು ಮಹಿಳೆ ಸೇರಿದಂತೆ ಮೂವರು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಲಾಕ್ ಡೌನ್ ಜಾರಿಯಾದ ಹಿನ್ನೆಲೆಯಲ್ಲಿ ರೈಲು ಹಾಗೂ ಬಸ್ ಸಂಚಾರ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಕಾಲ್ನಡಿಗೆ ಮೂಲಕ ಬೆಂಗಳೂರು ಕಡೆಯಿಂದ ಮಂಗಳೂರಿಗೆ ಆಗಮಿಸಿದ್ದು, ಅಲ್ಲಿಂದ ಸಾಲೆತ್ತೂರು ಮೂಲಕ ಕೊಡಂಗಾಯಿ ಭಾಗದಲ್ಲಿ ಕಾಣಿಕೊಂಡರು. ಈ ಬಗ್ಗೆ ಕೊಡಂಗಾಯಿ ಯುವಕರು ವಿಟ್ಲ ಎಸೈ ವಿನೋದ್ ಕುಮಾರ್ ಅವರಿಗೆ ಮಾಹಿತಿ ನೀಡಿದ್ದು, ತಕ್ಷಣವೇ ಸ್ಥಳಕ್ಕೆ ತೆರಳಿದ ಎಸೈ ಮೂವರನ್ನು ವಿಚಾರಿಸಿದ್ದಾರೆ. ಕೊಡಂಗಾಯಿ ಯಲ್ಲಿ ಅವರಿಗೆ ವಾಸ್ತವ್ಯ ನೀಡಲು ಮುಂದಾಗಿದ್ದರು. ಮಹಿಳೆಯರು ಅಲ್ಲಿ ನಿಲ್ಲಲು ನಿರಾಕರಿಸಿದ್ದಾರೆ. ಬಳಿಕ ಅವರನ್ನು  ಫ್ರೆಂಡ್ಸ್ ವಿಟ್ಲ ಆಂಬ್ಯುಲೆನ್ಸ್ ನಲ್ಲಿ ವಿಟ್ಲಕ್ಕೆ ಕರೆ ತಂದು ವಿಟ್ಲ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಾಲಿನಿ ಅವರ ಮುಖಾಂತರ ವಿಟ್ಲ ಸರ್ಕಾರಿ ಆಸ್ಪತ್ರೆಯಲ್ಲಿ ಆಶ್ರಯ ಕಲ್ಪಿಸಿದರು. ಅಲ್ಲಿಂದ ಮಹಿಳೆಯರು ಹೊರಗಡೆ ಹೋಗಲು ಪಟ್ಟು ಹಿಡಿದರೂ.ಬಳಿಕ ಅವರ ಮನವೊಲಿಸಲಾಗಿತ್ತು. ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್ ಆರ್ ಆಸ್ಪತ್ರೆಗೆ ಭೇಟಿ ನೀಡಿ ಮಹಿಳೆಯರಿಂದ ಮಾಹಿತಿ ಪಡೆದು ಅವರನ್ನು ಮಂಗಳೂರಿಗೆ ವರ್ಗಾಯಿಸುವುದಾಗಿ ತಿಳಿಸಿದರು.  ವಿಟ್ಲ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಾಲಿನಿ, ಕಂದಾಯ ನಿರೀಕ್ಷಕ ಪಕೀರ ಮೂಲ್ಯ, ದಿವಾಕರ, ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ವೇದಾವತಿ ಬಲ್ಲಾಳ್ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts