ಬಂಟ್ವಾಳ ಪುರಸಭೆಯ ವತಿಯಿಂದ ಆಸ್ಪತ್ರೆ ಹಾಗೂ ಪೊಲೀಸ್ ಠಾಣೆಗಳಿಗೆ ರಾಸಾಯನಿಕ ದ್ರಾವಣ ಸಿಂಪಂಡಣೆ ಮಂಗಳವಾರ ನಡೆಯಿತು.
ಬಂಟ್ವಾಳ ಪುರಸಭಾ ಮುಖ್ಯಾಧಿಕಾರಿ ಲೀನಾಬ್ರಿಟ್ಟೊ ಅವರ ನೇತೃತ್ವದಲ್ಲಿ ಪೌರಕಾರ್ಮಿಕರು ಬಿ.ಸಿ.ರೋಡ್, ಕೈಕಂಬದ ಆಸ್ಪತ್ರೆಗಳು, ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ಕಚೇರಿ, ಬಂಟ್ವಾಳ ನಗರ ಪೊಲೀಸ್ ಠಾಣೆ, ಗೃಹರಕ್ಷಕ ದಳ ಕಚೇರಿ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳಿಗೆ ದ್ರಾವಣ ಸಿಂಪಡಿಸಿದರು. ಕಳೆದ ಕೆಲ ದಿನಗಳ ಹಿಂದೆ ಬಿ.ಸಿ.ರೋಡು, ಬಂಟ್ವಾಳ ಪೇಟೆಗಳಲ್ಲಿ ರಾಸಾಯನಿಕ ದ್ರಾವಣ ಸಿಂಪಡಿಸಲಾಗಿದ್ದು ಮುಂದಿನ ದಿನಗಳಲ್ಲಿ ಪುರಸಭಾ ವ್ಯಾಪ್ತಿಯ ಎಲ್ಲಾ ಬ್ಯಾಂಕ್ ಗಳಿಗೆ ದ್ರಾವಣ ಸಿಂಪಡಿಸುವುದಾಗಿ ಮುಖ್ಯಾಧಿಕಾರಿ ತಿಳಿಸಿದ್ದಾರೆ. ಪುರಸಭಾ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ, ಸಮುದಾಯ ಸಂಘಟಕಿ ಉಮಾವತಿ, ಪರಿಸರ ಎಂಜಿನಿಯರ್ ಸಹಾಯಕ ಇಕ್ಭಾಲ್ ಹಾಗೂ ಸಿಬ್ಬಂದಿ ಹಾಜರಿದ್ದರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…