
ತಾಲೂಕಿನ ಪುದು ಗ್ರಾಮದ ನಿವಾಸಿ ಮೊಹಮ್ಮದ್ ಅಶ್ರಫ್ ಕೇರಳದ ಮಲ್ಲಪ್ಪುರಂ ಜಿಲ್ಲೆಯಲ್ಲಿ ಕೆಲಸ ಮಾಡಿಕೊಂಡಿದ್ದು, ಲಾಕ್ ಡೌನ್ ಘೋಷಣೆಯಾದ ನಂತರ ಏ.11ರಂದು ಲಾರಿ ಮೂಲಕ ಮಂಗಳೂರಿಗೆ ಬಂದು, ಸಂಬಂದಿಕರ ಮನೆಯಾದ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಬೊಳ್ಳಾಯಿಯಲ್ಲಿ ಇರುವುದನ್ನು ಪತ್ತೆಹಚ್ಚಿರುವ ಬಂಟ್ವಾಳ ನಗರ ಠಾಣಾ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಕುರಿತು ಲಭ್ಯ ದೂರಿನಂತೆ ಬಂಟ್ವಾಳ ನಗರ ಪೊಲೀಸರು ಆತನನ್ನು ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿ ಇರಿಸಿದ್ದಾರೆ. ಸರ್ಕಾರದ ಆದೇಶ ಉಲ್ಲಂಘಿಸಿ, ಸಾಂಕ್ರಾಮಿಕ ರೋಗ ಹರಡುವ ಸಂಭವವಿದ್ದರೂ ಯಾವುದೇ ವೈದ್ಯಕೀಯ ಪರೀಕ್ಷೆಗೆ ಒಳಪಡದೆ ನಿರ್ಲಕ್ಷ್ಯ ವಹಿಸಿ ಅಂತರ್ ರಾಜ್ಯ ಪ್ರಯಾಣಿಸಿರುವುದಕ್ಕೆ ಆತನ ವಿರುದ್ದ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕಲಂ 269, 270 ಐಪಿ ಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
www.bantwalnews.com Editor: Harish Mambady



Be the first to comment on "ಕೇರಳದಿಂದ ಮರಳಿದ ಬಂಟ್ವಾಳದ ವ್ಯಕ್ತಿ: ಪ್ರಕರಣ ದಾಖಲು"