ವಲಸೆ ಕಾರ್ಮಿಕರು ಇರುವ ಬರಿಮಾರು, ಪಲ್ಲಿಪ್ಪಾಡಿ, ಕರಿಯಂಗಳ, ಕುಡ್ತಮುಗೇರು, ಸಾಲೆತ್ತೂರು, ಬಂಟ್ವಾಳ ಕಡೆಗಳಿಗೆಲ್ಲ ಬಂಟ್ವಾಳ ವೃತ್ತನಿರೀಕ್ಷಕ ಟಿ.ಡಿ.ನಾಗರಾಜ್ ನೇತೃತ್ವದಲ್ಲಿ ಪೊಲೀಸರ ತಂಡ ಬುಧವಾರ ಪರಿಶೀಲನೆ ನಡೆಸಿತು. ಈಗಾಗಲೇ ಸಾಲೆತ್ತೂರಿನಲ್ಲಿ ಸ್ಥಳೀಯ ಪಂಚಾಯಿತಿ ಮೂಲಕ ವಲಸೆ ಕೂಲಿ ಕಾರ್ಮಿಕರಿಗೆ ಅವಶ್ಯಕ ಸಾಮಗ್ರಿಗಳನ್ನು ಒದಗಿಸಲಾಗಿದ್ದು, ಹೆಚ್ಚಿನ ನೆರವಾಗಿ ವಿಟ್ಲ ಠಾಣಾಧಿಕಾರಿ ವಿನೋದ್ ರೆಡ್ಡಿ ಅವರೂ ಬಂಟ್ವಾಳ ವೃತ್ತ ನೀರಿಕ್ಷಕರಾದ ಟಿ,ಡಿ ನಾಗರಾಜ್ ನೇತೃತ್ವದಲ್ಲಿ ಆಹಾರ ಕಿಟ್ ವಿತರಿಸಿದರು. ಪೋಲಿಸ್ ಸಿಬ್ಬಂದಿಗಳಾದ ಲೋಕೆಶ್, ಸತೀಶ್, ಯೋಗೇಶ್ ಹಾಗೂ ಕೊಳ್ನಾಡು ಬೀಟ್ ಸಿಬ್ಬಂದಿ ಅಶೋಕ್ ಕುಮಾರ್ ಉಪಸ್ಥಿತರಿದ್ದರು.
www.bantwalnews.com Editor: Harish Mambady
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…