ಸಾರ್ವಜನಿಕರಿಗೆ ಯಾವುದೇ ಅಡಚಣೆ ಆಗದಂತೆ ಅವಶ್ಯಕ ಸಾಮಗ್ರಿಗಳನ್ನು ಪೂರೈಸುವ ನಿಟ್ಟಿನಲ್ಲಿ ಪೂರೈಕೆಗೆ ಸಂಬಂಧಿಸಿದಂತೆ ಮಂಗಳೂರು ಉಪವಿಭಾಗಾಧಿಕಾರಿಗಳು ಮತ್ತು ಪುತ್ತೂರು ಉಪವಿಭಾಗಾಧಿಕಾರಿಗಳು ಏ.14ರವರೆಗೆ ನೀಡಿರುವ ಎಲ್ಲ ಪಾಸುಗಳು ಏ.20ರವರೆಗೆ ಮುಂದುವರಿಸಲಾಗಿದೆ. ಹೊಸದಾಗಿ ಪಾಸುಗಳ ಅಗತ್ಯವಿದ್ದಲ್ಲಿ ಸಂಬಂಧಪಟ್ಟ ಉಪವಿಭಾಗಾಧಿಕಾರಿ ಕಚೇರಿಯನ್ನೇ ಸಂಪರ್ಕಿಸುವುದು ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆನ್ಲೈನ್ ಪಾಸ್:
ಲಾಕ್ ಡೌನ್ ಹಿನ್ನೆಲೆಯಲ್ಲಿ ಅಗತ್ಯ ಸೇವೆಗಳನ್ನು ಒದಗಿಸುವವರಿಗೆ ಆನ್ ಲೈನ್ ಮೂಲಕ ಪಾಸುಗಳಿಗೆ ಅರ್ಜಿ ಸಲ್ಲಿಸುವ ಸೇವೆ ಏಪ್ರಿಲ್ 16ರಿಂದ ಆರಂಭವಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗತ್ಯ ಸೇವೆ ಒದಗಿಸುವರು ಪಾಸುಗಳಿಗೆ ಆನ್ ಲೈನ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ePass system introduced for essential services in DK District. Henceforth no manual passes would be issued. To apply for ePass click on https://bit.ly/dkdpermit