ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬುಧವಾರ ತಾಲೂಕಿನ ಕಡೇಶ್ವಾಲ್ಯ, ವೀರಕಂಭ, ಅನಂತಾಡಿ ಹಾಗೂ ನೆಟ್ಲಮುಡ್ನೂರು ಗ್ರಾಮ ಪಂಚಾಯತ್ಗಳಿಗೆ ಭೇಟಿ ನೀಡಿ ಕೊರೊನಾ ವೈರಸ್ ಮುಂಜಾಗ್ರತಾ ಹಿನ್ನೆಲೆಯ ಟಾಸ್ಕ್ಪೋರ್ಸ್ ಸಮಿತಿಗಳ ಪರಿಶೀಲನಾ ಸಭೆ ನಡೆಸಿದರು.
ಜಿ.ಪಂ.ಸದಸ್ಯರಾದ ಕಮಲಾಕ್ಷಿ ಪೂಜಾರಿ, ಮಂಜುಳಾ ಮಾಧವ ಮಾವೆ, ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಸದಸ್ಯೆ ಗೀತಾ ಚಂದ್ರಶೇಖರ್, ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಶಾಸಕರ ಆಪ್ತ ಸಹಾಯಕ ದಿನೇಶ್, ನೆಟ್ಲಮುಡ್ನೂರು ಗ್ರಾ.ಪಂ.ಅಧ್ಯಕ್ಷೆ ವಿಜಯ, ಅನಂತಾಡಿ ಗ್ರಾ.ಪಂ.ಅಧ್ಯಕ್ಷ ಸನತ್ಕುಮಾರ್ ರೈ, ಕಡೇಶ್ವಾಲ್ಯ ಗ್ರಾ.ಪಂ.ಅಧ್ಯಕ್ಷೆ ಶ್ಯಾಮಲಾ ಶೆಟ್ಟಿ, ವೀರಕಂಭ ಗ್ರಾ.ಪಂ.ಅಧ್ಯಕ್ಷೆ ಪ್ರೇಮಲತಾ, ಗ್ರಾ.ಪಂ.ಗಳ ಉಪಾಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಕರಣಿಕರು, ಬೀಟ್ ಪೊಲೀಸರು ಮೊದಲಾದವರು ಭಾಗವಹಿಸಿದ್ದರು.