ಅಕ್ರಮವಾಗಿ ಕೆಂಪು ಕಲ್ಲು ಸಾಗಿಸುತ್ತಿದ್ದ ಲಾರಿಯನ್ನು ಕುರ್ನಾಡು ಎಂಬಲ್ಲಿ ಗುರುವಾರ ಮಧ್ಯಾಹ್ನ ಚಾಲಕ ಸಹಿತ ಕೊಣಾಜೆ ಪೊಲೀಸರಿಗೆ ಹಸ್ತಾಂತರಿಸಲಾಯಿತು. ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ಕಾರ್ಯಾಚರಣೆ ನಡೆಸಿದ್ದರು.
ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಸರಕಾರದ ನಿಯಮ ಮೀರಿ ಕುರ್ನಾಡು ಕಡೆಯಿಂದ ಮುಡಿಪು ಕಡೆಗೆ ಅನುಮತಿ ರಹಿತವಾಗಿ ಕೆಂಪು ಕಲ್ಲು ಸಾಗಿಸುತ್ತಿದ್ದ ಪ್ರಕರಣವಿದು.