ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿರುವ ಪ್ರಕರಣವನ್ನು ಬಂಟ್ವಾಳ ಪೊಲೀಸರು ಗುರುವಾರ ಪತ್ತೆಹಚ್ಚಿದ್ದು, ಈ ಸಂಬಂಧ ಓರ್ವನನ್ನು ಬಂಧಿಸಿ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಬಂಟ್ವಾಳ ತಾಲೂಕಿನ ಕರಿಯಂಗಳ ಎಂಬಲ್ಲಿ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಗೆ ನಡೆಯುತ್ತಿರುವ ಕುರಿತು ಖಚಿತ ವರ್ತಮಾನದ ಮೇರೆಗೆ ಪೊಲೀಸ್ ಪ್ರೊಬೆಷನರಿ ಐಪಿಎಸ್ ಅಧಿಕಾರಿ ರಂಜಿತ್ ಗುರುವಾರ ಮಧ್ಯಾಹ್ನ ದಾಳಿ ನಡೆಸಿದ ಸಂದರ್ಭ ಸ್ಥಳದಲ್ಲಿ 10 ಲೋಡ್ ಮರಳು, ಮರಳು ತುಂಬಿಸಲು ಉಪಯೋಗಿಸುತ್ತಿದ್ಧ 1 ಹಿಟಾಚಿ, 3 ಬೋಟ್ ಗಳು ಇದ್ದವು. ಇವೆಲ್ಲವನ್ನೂ ವಶಕ್ಕೆ ಪಡೆಯಲಾಗಿದ್ದು, ಪಾಂಡುರಂಗ ಎಂಬಾತ ಬಂಧಿತ ಎಂದು ಪೊಲೀಸರು ತಿಳಿಸಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…