12 ದಿನಗಳ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಕೋವಿಡ್ 19 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
ಏ.1ರಂದು ಜಿಲ್ಲಾಡಳಿತ ಸ್ಥಾಪಿಸಿದ ವೈದ್ಯಕೀಯ ನಿಗಾ ಘಟಕದಲ್ಲಿ 39 ವಯಸ್ಸಿನ ವ್ಯಕ್ತಿಯನ್ನು 14 ದಿನಗಳ ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು. ಅವರ ಮೊದಲನೇ ಗಂಟಲು ದ್ರವ ಪರೀಕ್ಷೆಯಲ್ಲಿ ಸೋಂಕು ಇರಲಿಲ್ಲ. ಏ. 13ರಂದು ಪುನಃ ಕಳಿಸಿದ ಗಂಟಲು ದ್ರವ ಮಾದರಿ ಪರೀಕ್ಷೆಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಈ ಕಾರಣದಿಂದ ವೆನ್ಲಾಕ್ ಆಸ್ಪತ್ರೆಗೆ ಇವರನ್ನು ಸ್ಥಳಾಂತರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ದ.ಕ. ಜಿಲ್ಲೆಯಲ್ಲಿ 9 ಮಂದಿ ಗುಣಮುಖರಾಗಿ ಮನೆಗೆ ಹಿಂದಿರುಗಿದ್ದು, ಗೃಹ ಕ್ವಾರಂಟೈನ್ ನಲ್ಲಿದ್ದಾರೆ. ಅವರ ಮೇಲೆಯೂ ನಿಗಾ ವಹಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ರೂಪೇಶ್ ಏ.17ರಂದು ಮಧ್ಯಾಹ್ನ ನೀಡಿದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
Be the first to comment on "ದಕ್ಷಿಣ ಕನ್ನಡ: 12 ದಿನಗಳ ಬಳಿಕ ಬಂತು 13ನೇ ಕೊರೊನಾ ಪಾಸಿಟಿವ್ ಕೇಸ್"