ಪ್ರಮುಖ ಸುದ್ದಿಗಳು

ದಕ್ಷಿಣ ಕನ್ನಡ: 12 ದಿನಗಳ ಬಳಿಕ ಬಂತು 13ನೇ ಕೊರೊನಾ ಪಾಸಿಟಿವ್ ಕೇಸ್

12 ದಿನಗಳ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಕೋವಿಡ್ 19 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.

ಜಾಹೀರಾತು

ಏ.1ರಂದು ಜಿಲ್ಲಾಡಳಿತ ಸ್ಥಾಪಿಸಿದ ವೈದ್ಯಕೀಯ ನಿಗಾ ಘಟಕದಲ್ಲಿ  39 ವಯಸ್ಸಿನ ವ್ಯಕ್ತಿಯನ್ನು 14 ದಿನಗಳ ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು. ಅವರ ಮೊದಲನೇ ಗಂಟಲು ದ್ರವ ಪರೀಕ್ಷೆಯಲ್ಲಿ ಸೋಂಕು ಇರಲಿಲ್ಲ.  ಏ. 13ರಂದು ಪುನಃ ಕಳಿಸಿದ ಗಂಟಲು ದ್ರವ ಮಾದರಿ ಪರೀಕ್ಷೆಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಈ ಕಾರಣದಿಂದ ವೆನ್ಲಾಕ್ ಆಸ್ಪತ್ರೆಗೆ ಇವರನ್ನು ಸ್ಥಳಾಂತರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ದ.ಕ. ಜಿಲ್ಲೆಯಲ್ಲಿ 9 ಮಂದಿ ಗುಣಮುಖರಾಗಿ ಮನೆಗೆ ಹಿಂದಿರುಗಿದ್ದು, ಗೃಹ ಕ್ವಾರಂಟೈನ್ ನಲ್ಲಿದ್ದಾರೆ. ಅವರ ಮೇಲೆಯೂ ನಿಗಾ ವಹಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ರೂಪೇಶ್ ಏ.17ರಂದು ಮಧ್ಯಾಹ್ನ ನೀಡಿದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ