ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಬೆಂಜನಪದವು ಎಂಬಲ್ಲಿ ಕಳ್ಳಭಟ್ಟಿ ತಯಾರಿಕಾ ಘಟಕಕ್ಕೆ ಮಂಗಳೂರು ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಇಬ್ಬರನ್ನು ದಸ್ತಗಿರಿ ಮಾಡಿದ್ದಾರೆ.
ಅಬಕಾರಿ ಜಂಟಿ ಆಯುಕ್ತ ಶೈಲಜಾ ಕೋಟೆ ನಿರ್ದೇಶನದಂತೆ ಅಬಕಾರಿ ಅಧೀಕ್ಷಕ ವಿನೋದ್ ಕುಮಾರ್ ನೇತೃತ್ವದಲ್ಲಿ ಬಂಟ್ವಾಳ ಉಪ ವಿಭಾಗದ ಉಪ ಅಧೀಕ್ಷಕರಾದ ಗೀತಾ ಮಾಗದಶನದಂತ ಜಿಲ್ಲಾ ತಂಡದ ಅಬಕಾರಿ ನಿರೀಕ್ಷಕ ವಿಜಯ್ ಕುಮಾರ್ , ಉಪ ನಿರೀಕ್ಷಕರು ಹಾಗೂ ಸಿಬ್ಬಂದಿಯೊಂದಿಗೆ ಬಂಟ್ವಾಳ ತಾಲೂಕಿನ ಅಂಮುಂಜೆ ಗ್ರಾಮದ ಬೆಂಜನಪದವು ಎಂಬಲ್ಲಿ ಕ್ರಿಸ್ಟನ್ ಡಿಸೋಜ ರವರ ಮನೆಯ ಹಿಂಭಾಗದಲ್ಲಿ 1200 ಲೀಟರ್ ಬೆಲ್ಲದ ಕೊಳೆ ಮತ್ತು ಕಳ್ಳಭಟ್ಟಿ ತಯಾರಿಸುವ ಸಾಮಗ್ರಿ, 950 ಕೇಜಿ ಬೆಲ್ಲ ಮತ್ತು 500 ಲೀಟರ್ ನಕಲಿ ವೈನ್, 300 ಲೀಟರ್ ಬಟಾಟೆ ಮಿಶ್ರಣದ ಬೆಲ್ಲದ ಕೊಳೆಯನ್ನು ಜಫ್ತುಪಡಿಸಲಾಯಿತು. ಆರೋಪಿಗಳಾದ ಕಿರಣ್ ಕುಮಾರ್ ಮತ್ತು ಕ್ರಿಸ್ಟನ್ ಡಿಸೋಜ ರವರನ್ನು ದಸ್ತಗಿರಿ ಮಾಡಲಾಗಿದೆ. ಪ್ರಕರಣವನ್ನು ಜಿಲ್ಲಾ ತಂಡದ ಅಬಕಾರಿ ಉಪ ನಿರೀಕ್ಷಕರು ಜಗನ್ನಾಥ ನಾಯ್ಕ ರವರು ದಾಖಲಿಸಿರುತ್ತಾರೆ
Be the first to comment on "ಕಳ್ಳಭಟ್ಟಿ ತಯಾರಿ ಪತ್ತೆ, ಆರೋಪಿಗಳ ದಸ್ತಗಿರಿ"