ಜಿಲ್ಲಾ ಸುದ್ದಿ

ವಿದೇಶ ಪ್ರಯಾಣ ಮಾಡಿದ್ದರೆ ತಿಳಿಸಿ, ರೋಗಲಕ್ಷಣ ಕಂಡುಬಂದರೆ ಕೂಡಲೇ ಫೀವರ್ ಕ್ಲಿನಿಕ್ ಸಂಪರ್ಕಿಸಿ

ಕೋವಿಡ್ ಸಂಬಂಧಿಸಿದಂತೆ ಅನೇಕ ಬಾರಿ ವಿದೇಶಿ ಟ್ರಾವೆಲ್ ಹಿಸ್ಟರಿ ಇದ್ದರೆ, ಅಥವಾ ಕೋವಿಡ್ ಗೆ ಸಂಬಂಧಿಸಿದ ಸೂಚನೆಗಳು ಇದ್ದರೆ ಕೂಡಲೇ ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಎಂದು ತಿಳಿಸಿದ್ದರೂ ಜನರು ಅದನ್ನು ಪಾಲಿಸುತ್ತಿಲ್ಲ ಎಂದು ದ.ಕ.ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ತಿಳಿಸಿದ್ದಾರೆ. ಈ ಕುರಿತು ವಿಡಿಯೋ ಸಂದೇಶ ನೀಡಿರುವ ಅವರು, ಕೋವಿಡ್ ಗೆ ಸಂಬಂಧಿಸಿದ ಲಕ್ಷಣಗಳು ಕಂಡುಬಂದರೆ ಫೀವರ್ ಕ್ಲಿನಿಕ್ ಸಂಪರ್ಕಿಸಿ. ಕೂಡಲೇ ವೈದ್ಯಾಧಿಕಾರಿಗಳ ಗಮನಕ್ಕೆ ತನ್ನಿ. ನಾವು ಇನ್ನೂ ಜಾಗರೂಕರಾಗುವ ಸಮಯ ಬಂದಿದೆ ಎಂದು ತಿಳಿಸಿದ್ದಾರೆ. ಪೂರ್ಣ ವಿಡಿಯೋಕ್ಕೆ ಇಲ್ಲಿ ಕ್ಲಿಕ್ ಮಾಡಿರಿ.

ಸಾರ್ವಜನಿಕರಲ್ಲಿ ವಿನಂತಿ: .. ಜಿಲ್ಲೆಯು ಫೆಬ್ರವರಿ 2020ರಿಂದಲೇ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಕೋವಿಡ್ 19 ನಿಯಂತ್ರಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ವಿದೇಶೀ ಪ್ರಯಾಣದ ಇತಿಹಾಸ ಹೊಂದಿರುವ ಪ್ರತಿಯೊಂದು ಮನೆಯ ಮಾಹಿತಿಯನ್ನು ಕಲೆ ಹಾಕಿ ಗೃಹ ನಿಗಾವಣೆ ಯಲ್ಲಿರುವವರನ್ನು ಸಂಪರ್ಕಿಸಿ, ಅವರ ಆರೋಗ್ಯ ವಿಷಯದ ಬಗ್ಗೆ ಹೆಚ್ಚಿನ ಗಮನವನ್ನು ವಹಿಸಲಾಗುತ್ತದೆ.

ಮುಂದುವರೆದು, ಸಾರ್ವಜನಿಕರಲ್ಲಿಯೂ ಸಹ ತಾವು ವಿದೇಶ ಪ್ರಯಾಣ ಮಾಡಿದ್ದಲ್ಲಿ ಅಥವಾ ತಮಗೆ ಜ್ವರ, ಕೆಮ್ಮು, ಉಸಿರಾಟದ ತೊಂದರೆ ಇದ್ದಲ್ಲಿ ನೇರವಾಗಿ ಹತ್ತಿರದ ಜ್ವರ ಕ್ಲಿನಿಕ್ ಸಂಪರ್ಕಿಸಲು ಕೋರಲಾಗಿರುತ್ತದೆ. ಕೋವಿಡ್ ಪರೀಕ್ಷೆಗೊಳಪಡಿಸುವ ಅಥವಾ  ಗೃಹ ಅಥವಾ ಸರಕಾರಿ ನಿಗಾವಣೆಯಲ್ಲಿರುವ  ಭಯದಿಂದ ಅಥವಾ ಸಂಕೋಚದಿಂದ ತಮ್ಮ ಆರೋಗ್ಯದ ವಿಷಯದ ಬಗ್ಗೆ ಸಾರ್ವಜನಿಕರು ಮುಕ್ತವಾಗಿ ತಮ್ಮ ಆರೊಗ್ಯ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ತಮ್ಮ ಮಾಹಿತಿಯನ್ನು ಹಂಚಿಕೊಳ್ಳದಿರುವುದು ತೀರಾ ವಿಷಾದನೀಯ.

 ಖಾಸಗೀ ಆಸ್ಪತ್ರೆಯ ವೈದ್ಯಾಧಿಕಾರಿಗಳಲ್ಲಿಯೂ ಸಹ ಜ್ವರ, ಉಸಿರಾಟದ ತೊಂದರೆ ಇರುವಂತಹ ರೋಗಿಗಳ ಬಗ್ಗೆ ಮಾಹಿತಿ ನೀಡಲು ಕೋರಲಾಗಿರುತ್ತದೆ. ಆದಾಗ್ಯೂ ಸಹ, ಕೆಲವರು ವಿಷಯವನ್ನು ಗಂಭೀರವಾಗಿ ಪರಿಗಣಿಸಿದಂತೆ ಕಂಡುಬರುವುದಿಲ್ಲ.

 ನಾವು ಸಾರ್ವಜನಿಕರಲ್ಲಿ ತಿಳಿಸುವುದೇನೆಂದರೆ, ಈವರೆಗೆ ಪರೀಕ್ಷೆಗೊಳಪಟ್ಟಿರುವಂತಹ ಯಾವೊಬ್ಬ ವ್ಯಕ್ತಿಯ ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸಿರುವುದಿಲ್ಲಸೋಂಕಿತ ಕೋವಿಡ್ ರೋಗಿಗಳ ಸಂಖ್ಯೆಗಳ ಮಾಹಿತಿಯನ್ನು ಮಾತ್ರ ಸಾರ್ವಜನಿಕರ ಮಾಹಿತಿಗಾಗಿ ನೀಡಲಾಗುತ್ತಿದೆ. ಇದು ಸಹ ಸಾರ್ವಜನಿಕರು ವಹಿಸಬೇಕಾದ ಮುಂಜಾಗರೂಕತಾ ಕ್ರಮಕ್ಕಾಗಿ ನೀಡುವ ಮಾಹಿತಿ ಆಗಿರುತ್ತದೆ. ಆದ್ದರಿಂದ ಸಾರ್ವಜನಿಕರು ಯಾವುದೇ ಸಂಕೋಚಪಡದೆ, ತಮ್ಮ ಕುಟುಂಬದ ಹಾಗೂ ಇತರರ ರಕ್ಷಣೆಗಾಗಿ ಜನವರಿ ತಿಂಗಳಿನಿಂದ ವಿದೇಶದಿಂದ ಜಿಲ್ಲೆಗೆ ಆಗಮಿಸಿರುವ ಮಾಹಿತಿಯನ್ನು ನೀಡುವುದು ಸೂಕ್ತವಾಗಿರುತ್ತದೆ.

 ತಮ್ಮ ಕುಟುಂಬದಲ್ಲಿ ಯಾರಿಗಾದರೂ, ಜ್ವರ, ಕೆಮ್ಮು, ಉಸಿರಾಟದ ತೊಂದರೆ ಇದ್ದಲ್ಲಿ ಕೂಡಲೇ ಸರಕಾರಿ ವೈದ್ಯಾಧಿಕಾರಿಗಳ ಗಮನಕ್ಕೆ ತರಲು ಅಥವಾ 1077 ಸಂಖ್ಯೆಗೆ ಕಾಲ್ ಮಾಡಿ ಮಾಹಿತಿ ನೀಡಲು ಮಗದೊಮ್ಮೆ ವಿನಂತಿಸುತ್ತೇವೆ.

 ಇದು ನಿಮ್ಮ ಸುರಕ್ಷತೆಗಾಗಿ ಮಾಡಿಕೊಳ್ಳುವ ಮನವಿ.

  • ನಾವು ನಿಮಗಾಗಿ ಶ್ರಮಿಸುತ್ತಿದ್ದೇವೆ
  • ನೀವು ನಮ್ಮೊಂದಿಗೆ ಸಹಕರಿಸಿ
  • ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಿ,
  • ಮನೆಯಿಂದ ಹೊರಗೆ ಬರುವಾಗ ಮಾಸ್ಕ್ ಧರಿಸಿರಿ
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts