ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ (ಏ.20) ಯಾವುದೇ ಕೊರೊನಾ ಪಾಸಿಟಿವ್ ಕೇಸ್ ವರದಿಯಾಗಿಲ್ಲ. ಸೋಮವಾರ ಲಭ್ಯವಾದ 25 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷೆ ವರದಿಗಳೆಲ್ಲವೂ ನೆಗೆಟಿವ್ ಆಗಿದೆ. ಆದರೆ ಸೋಮವಾರ 255 ಮಂದಿಯ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಈಗಾಗಲೇ ಕಳುಹಿಸಿದವರದ್ದೂ ಸೇರಿದಂತೆ 394 ಮಂದಿಯ ಪರೀಕ್ಷೆ ಫಲಿತಾಂಶ ಬರಲು ಬಾಕಿ ಇದೆ.
ವಿವರ ಹೀಗಿದೆ.
ಬಂಟ್ವಾಳ ತಾಲೂಕಿನ ಕಸ್ಬಾದಲ್ಲಿ ಮೃತಪಟ್ಟ ರೋಗಿ ಮನೆ ಮತ್ತು ಸುತ್ತಮುತ್ತಲಿನ ಪ್ರದೇಶವನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲಾಗಿದ್ದು, ಅದಕ್ಕೆ ತಾಲೂಕು ತಹಸೀಲ್ದಾರ್ ಅವರನ್ನು ಇನ್ಸಿಡೆಂಟ್ ಕಮಾಂಡರ್ ಆಗಿ ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿಂದು ರುಪೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…