ಬಂಟ್ವಾಳದಲ್ಲಿ ಕೊರೋನಾ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಉಪಸ್ಥಿತಿಯಲ್ಲಿ ತಾಲೂಕಿನ ಉನ್ನತ ಮಟ್ಟದ ಅಧಿಕಾರಿ ಗಳ ತುರ್ತು ಸಭೆ ಸೋಮವಾರ ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ನಡೆಯಿತು.
ಜಿಲ್ಲಾ ಆರೋಗ್ಯ ಸರ್ವೇಕ್ಷಣಾಧಿಕಾರಿ ಡಾ. ರಾಜೇಶ್, ತಹಸೀಲ್ದಾರ್ ರಶ್ಮಿ ಎಸ್.ಆರ್, ಡಿವೈಎಸ್ಪಿ ವೆಲೆಂಟಿನ್ ಡಿ’ ಸೋಜಾ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಾ ಪ್ರಭು, ಪುರಸಭಾ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ, ಸಮುದಾಯ ಸಂಘಟಕಿ ಉಮಾವತಿ, ಬುಡಾ ಅಧ್ಯಕ್ಷ ದೇವದಾಸ್ ಶೆಟ್ಟಿ, ಆಹಾರ ಶಿರಸ್ತೇದಾರ್ ಶ್ರೀನಿವಾಸ್, ಕಂದಾಯ ಇಲಾಖೆಯ ರಾಮ ಕಾಟಿಪಳ್ಳ ಉಪಸ್ಥಿತರಿದ್ದರು.
ಬಂಟ್ವಾಳ ವ್ಯಾಪ್ತಿಯಲ್ಲಿ ಲಾಕ್ ಡೌನ್ ನಿಯಮಗಳನ್ನು ಕಟ್ಟು ನಿಟ್ಟಾಗಿ ಜಾರಿಗೆ ತರುವುದು, ಸೀಲ್ ಡೌನ್ ಪ್ರದೇಶದ ಜನರಿಗೆ ಅವಶ್ಯಕ ಸಾಮಾಗ್ರಿ ಗಳನ್ನು ಕಂಟ್ರೋಲ್ ರೂಮ್ ಮೂಲಕ ತಲುಪಿಸುವುದು ಹಾಗೂ ಕರೋನಾ ಪ್ರಕರಣ ಕಂಡು ಬಂದ ವ್ಯಾಪ್ತಿಯಲ್ಲಿ ನಿರಂತರ ಆರೋಗ್ಯ ತಪಾಸಣೆ ನಡೆಸಲು ನಿರ್ಧರಿಸಲಾಯಿತು. ನಿಯಮ ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೋಲೀಸ್ ಇಲಾಖೆಗೆ ಸೂಚಿಸಲಾಯಿತು.
ಅನಿವಾರ್ಯ ಪರಿಸ್ಥಿತಿಯಲ್ಲಿ ಆಗುವ ಸಣ್ಣ ಪುಟ್ಟ ತೊಂದರೆಗಳನ್ನು ಜನರು ಸಹಿಸಿಕೊಳ್ಳುವುದರ ಜತೆಗೆ ಆರೋಗ್ಯ ತಪಾಸಣೆಗಾಗಿ ಮತ್ತು ಮಾಹಿತಿ ಸಂಗ್ರಹಕ್ಕಾಗಿ ಮನೆ ಮನೆಗೆ ಬೇಟಿ ನೀಡುವ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಪೂರ್ಣ ಸಹಕಾರ ನೀಡುವಂತೆ ಜನರಲ್ಲಿ ಶಾಸಕರು ವಿನಂತಿಸಿದರು.