ಬಂಟ್ವಾಳ

ಬಂಟ್ವಾಳ ಲಾಕ್ ಡೌನ್: ಸಂಸದ, ಶಾಸಕರಿಂದ ತುರ್ತು ಸಭೆ

ಬಂಟ್ವಾಳದಲ್ಲಿ ಕೊರೋನಾ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ  ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಉಪಸ್ಥಿತಿಯಲ್ಲಿ ತಾಲೂಕಿನ ಉನ್ನತ ಮಟ್ಟದ ಅಧಿಕಾರಿ ಗಳ ತುರ್ತು ಸಭೆ ಸೋಮವಾರ ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ನಡೆಯಿತು.

ಜಾಹೀರಾತು

ಜಿಲ್ಲಾ ಆರೋಗ್ಯ ಸರ್ವೇಕ್ಷಣಾಧಿಕಾರಿ ಡಾ. ರಾಜೇಶ್, ತಹಸೀಲ್ದಾರ್ ರಶ್ಮಿ ಎಸ್.ಆರ್, ಡಿವೈಎಸ್ಪಿ ವೆಲೆಂಟಿನ್ ಡಿ’ ಸೋಜಾ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಾ ಪ್ರಭು, ಪುರಸಭಾ ಮುಖ್ಯಾಧಿಕಾರಿ  ಲೀನಾ ಬ್ರಿಟ್ಟೊ, ಸಮುದಾಯ ಸಂಘಟಕಿ ಉಮಾವತಿ, ಬುಡಾ ಅಧ್ಯಕ್ಷ ದೇವದಾಸ್ ಶೆಟ್ಟಿ, ಆಹಾರ ಶಿರಸ್ತೇದಾರ್ ಶ್ರೀನಿವಾಸ್, ಕಂದಾಯ ಇಲಾಖೆಯ ರಾಮ ಕಾಟಿಪಳ್ಳ ಉಪಸ್ಥಿತರಿದ್ದರು.

ಬಂಟ್ವಾಳ ವ್ಯಾಪ್ತಿಯಲ್ಲಿ ಲಾಕ್ ಡೌನ್ ನಿಯಮಗಳನ್ನು ಕಟ್ಟು ನಿಟ್ಟಾಗಿ ಜಾರಿಗೆ ತರುವುದು, ಸೀಲ್ ಡೌನ್ ಪ್ರದೇಶದ ಜನರಿಗೆ ಅವಶ್ಯಕ ಸಾಮಾಗ್ರಿ ಗಳನ್ನು  ಕಂಟ್ರೋಲ್ ರೂಮ್  ಮೂಲಕ ತಲುಪಿಸುವುದು ಹಾಗೂ ಕರೋನಾ ಪ್ರಕರಣ ಕಂಡು ಬಂದ ವ್ಯಾಪ್ತಿಯಲ್ಲಿ ನಿರಂತರ ಆರೋಗ್ಯ ತಪಾಸಣೆ ನಡೆಸಲು ನಿರ್ಧರಿಸಲಾಯಿತು. ನಿಯಮ ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೋಲೀಸ್  ಇಲಾಖೆಗೆ ಸೂಚಿಸಲಾಯಿತು.

ಅನಿವಾರ್ಯ ಪರಿಸ್ಥಿತಿಯಲ್ಲಿ ಆಗುವ ಸಣ್ಣ ಪುಟ್ಟ ತೊಂದರೆಗಳನ್ನು ಜನರು ಸಹಿಸಿಕೊಳ್ಳುವುದರ ಜತೆಗೆ ಆರೋಗ್ಯ ತಪಾಸಣೆಗಾಗಿ ಮತ್ತು ಮಾಹಿತಿ ಸಂಗ್ರಹಕ್ಕಾಗಿ ಮನೆ ಮನೆಗೆ ಬೇಟಿ ನೀಡುವ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಪೂರ್ಣ ಸಹಕಾರ ನೀಡುವಂತೆ ಜನರಲ್ಲಿ ಶಾಸಕರು ವಿನಂತಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ