ಲಾಕ್ ಡೌನ್ ಸಂದರ್ಭ ಅಂಗಡಿ ಬಾಗಿಲು ಮುಚ್ಚಲು ಸೂಚಿಸಿದಾಗ ನಿರಾಕರಿಸಿ, ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ ಬಂಟ್ವಾಳ ತಾಲೂಕಿನ ಪುರಸಭಾ ವ್ಯಾಪ್ತಿಯ ಬಾರೆಕಾಡು ಎಂಬಲ್ಲಿ ನಡೆದಿದ್ದು, ಈ ಕುರಿತು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಷೇಧಾಜ್ಞೆ ಇದ್ದಾಗಲೂ ಬಾರೆಕಾಡು ಪರಿಸರದಲ್ಲಿ ಅದನ್ನು ಉಲ್ಲಂಘಿಸಿ ಅಂಗಡಿ ತೆರೆದಿರುವುದನ್ನು ಗಮನಿಸಿದ ಫ್ಲೈಯಿಂಗ್ ಸ್ಕ್ವಾಡ್ ನ ಅಧಿಕಾರಿ, ಬಾಗಿಲು ಹಾಕುವಂತೆ ಅಂಗಡಿಯಾತರನ್ನು ಸೂಚಿಸಿದ್ದು, ಈ ವೇಳೆ ಜನ ಜಮಾಯಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ ಎಂದು ದೂರಲಾಗಿದೆ. ಘಟನೆ ಸಂದರ್ಭ ಬೆದರಿಕೆಯೊಡ್ಡಿದ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಠಾಣೆಗೆ ದೂರು ನೀಡಲಾಗಿದ್ದು, ಇದರಂತೆ ರಫೀಕ್ ಮತ್ತಿತರರ ವಿರುದ್ಧ ಪ್ರಕರಣ ದಾಖಲಾಗಿದೆ. ಬಂಟ್ವಾಳ ಪೋಲೀಸ್ ತಂಡ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…