ಬಂಟ್ವಾಳ

ಕೋವಿಡ್ – ಸ್ಕ್ವ್ಯಾಡ್ ನ ಕರ್ತವ್ಯಕ್ಕೆ ಅಡ್ಡಿ, ಪ್ರಕರಣ ದಾಖಲು, ಇಬ್ಬರು ವಶಕ್ಕೆ

ಲಾಕ್ ಡೌನ್ ಸಂದರ್ಭ ಅಂಗಡಿ ಬಾಗಿಲು ಮುಚ್ಚಲು ಸೂಚಿಸಿದಾಗ ನಿರಾಕರಿಸಿ, ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ ಬಂಟ್ವಾಳ ತಾಲೂಕಿನ ಪುರಸಭಾ ವ್ಯಾಪ್ತಿಯ ಬಾರೆಕಾಡು ಎಂಬಲ್ಲಿ ನಡೆದಿದ್ದು, ಈ ಕುರಿತು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು

ನಿಷೇಧಾಜ್ಞೆ ಇದ್ದಾಗಲೂ ಬಾರೆಕಾಡು ಪರಿಸರದಲ್ಲಿ ಅದನ್ನು ಉಲ್ಲಂಘಿಸಿ ಅಂಗಡಿ ತೆರೆದಿರುವುದನ್ನು ಗಮನಿಸಿದ ಫ್ಲೈಯಿಂಗ್ ಸ್ಕ್ವಾಡ್ ನ ಅಧಿಕಾರಿ, ಬಾಗಿಲು ಹಾಕುವಂತೆ ಅಂಗಡಿಯಾತರನ್ನು ಸೂಚಿಸಿದ್ದು, ಈ ವೇಳೆ ಜನ ಜಮಾಯಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ ಎಂದು ದೂರಲಾಗಿದೆ. ಘಟನೆ ಸಂದರ್ಭ ಬೆದರಿಕೆಯೊಡ್ಡಿದ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಠಾಣೆಗೆ ದೂರು ನೀಡಲಾಗಿದ್ದು, ಇದರಂತೆ  ರಫೀಕ್ ಮತ್ತಿತರರ ವಿರುದ್ಧ ಪ್ರಕರಣ ದಾಖಲಾಗಿದೆ. ಬಂಟ್ವಾಳ ಪೋಲೀಸ್ ತಂಡ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts