ಬಂಟ್ವಾಳ ತಾಲೂಕು ಕಸಬಾ ಗ್ರಾಮದ 67 ವರ್ಷದ ಮಹಿಳೆಯೊಬ್ಬರಿಗೆ ಕೋವಿಡ್ 19 ಸೋಂಕು ಇರುವುದು ದೃಢಪಟ್ಟಿರುವುದಾಗಿ ದ.ಕ.ಜಿಲ್ಲಾಧಿಕಾರಿ ಸಿಂಧು ರೂಪೇಶ್ ಮಂಗಳವಾರ ಮಧ್ಯಾಹ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದರೊಂದಿಗೆ ಬಂಟ್ವಾಳ ತಾಲೂಕಿನಲ್ಲಿ 4 ಪ್ರಕರಣಗಳು ದೃಢವಾಗಿದ್ದು, ಇವುಗಳ ಪೈಕಿ ಒಬ್ಬರು ಸಾವನ್ನಪ್ಪಿದ್ದಾರೆ. ಇಬ್ಬರು ಗುಣಮುಖರಾಗಿದ್ದು, ಒಬ್ಬರು ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇವರು ಏ.18ರಂದು ಅಪರಾಹ್ನ ತೀವ್ರ ಉಸಿರಾಟದ ತೊಂದರೆಯಿಂದ ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿರುತ್ತಾರೆ ಎಂದು ತಿಳಿಸಿರುವ ಅವರು, ಗಂಟಲು ದ್ರವ ಮಾದರಿಯನ್ನು 18ರಂದು ಪರೀಕ್ಷೆಗೆ ಕಳುಹಿಸಲಾಗಿದ್ದು, ಪರೀಕ್ಷೆ ವರದಿ ಸ್ವೀಕೃತಗೊಂಡಿದ್ದು, ಕೋವಿಡ್ ಸೋಂಕು ದೃಢಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಮಹಿಳೆ ಏ.19ರಂದು ಮೃತಪಟ್ಟವರ ನೆರೆಮನೆಯವರಾಗಿರುತ್ತಾರೆಂದು ತಿಳಿದುಬಂದಿರುತ್ತದೆ ಎಂದು ಪ್ರಕಟಣೆಯಲ್ಲಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
www.bantwalnews.com Editor: Harish Mambady


Be the first to comment on "ಬಂಟ್ವಾಳದ ಮಹಿಳೆಗೆ ಕೊರೊನಾ ಪಾಸಿಟಿವ್"