ಪ್ರಮುಖ ಸುದ್ದಿಗಳು

ಬಂಟ್ವಾಳದ ಮಹಿಳೆಗೆ ಕೊರೊನಾ ಪಾಸಿಟಿವ್

ಬಂಟ್ವಾಳ ತಾಲೂಕು ಕಸಬಾ ಗ್ರಾಮದ 67 ವರ್ಷದ  ಮಹಿಳೆಯೊಬ್ಬರಿಗೆ ಕೋವಿಡ್ 19 ಸೋಂಕು ಇರುವುದು ದೃಢಪಟ್ಟಿರುವುದಾಗಿ ದ.ಕ.ಜಿಲ್ಲಾಧಿಕಾರಿ ಸಿಂಧು ರೂಪೇಶ್ ಮಂಗಳವಾರ ಮಧ್ಯಾಹ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು

ಇದರೊಂದಿಗೆ ಬಂಟ್ವಾಳ ತಾಲೂಕಿನಲ್ಲಿ 4 ಪ್ರಕರಣಗಳು ದೃಢವಾಗಿದ್ದು, ಇವುಗಳ ಪೈಕಿ ಒಬ್ಬರು ಸಾವನ್ನಪ್ಪಿದ್ದಾರೆ. ಇಬ್ಬರು ಗುಣಮುಖರಾಗಿದ್ದು, ಒಬ್ಬರು ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವರು ಏ.18ರಂದು ಅಪರಾಹ್ನ ತೀವ್ರ ಉಸಿರಾಟದ ತೊಂದರೆಯಿಂದ ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿರುತ್ತಾರೆ ಎಂದು ತಿಳಿಸಿರುವ ಅವರು, ಗಂಟಲು ದ್ರವ ಮಾದರಿಯನ್ನು 18ರಂದು ಪರೀಕ್ಷೆಗೆ ಕಳುಹಿಸಲಾಗಿದ್ದು, ಪರೀಕ್ಷೆ ವರದಿ ಸ್ವೀಕೃತಗೊಂಡಿದ್ದು, ಕೋವಿಡ್ ಸೋಂಕು ದೃಢಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಮಹಿಳೆ ಏ.19ರಂದು ಮೃತಪಟ್ಟವರ ನೆರೆಮನೆಯವರಾಗಿರುತ್ತಾರೆಂದು ತಿಳಿದುಬಂದಿರುತ್ತದೆ ಎಂದು ಪ್ರಕಟಣೆಯಲ್ಲಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

www.bantwalnews.com Editor: Harish Mambady

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ