ಕೋವಿಡ್ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಕಂಟೈನ್ಮೆಂಟ್ ಪ್ರದೇಶದ ಗ್ರಾಮವಾದ ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದಲ್ಲಿ ಸೋಮವಾರ ತಾಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಪರಿಶಿಲನಾ ಸಭೆ ನಡೆಸಿ ಅಗತ್ಯ ಕ್ರಮಗಳ ಕುರಿತು ಸೂಚಿಸಿದರು. ಈ ವೇಳೆ ಗ್ರಾಪಂ ಅಧ್ಯಕ್ಷ ನಾಸೀರ್, ಸ್ಥಳೀಯ ಅಧಿಕಾರಿಗಳು ಉಪಸ್ಥಿತರಿದ್ದು ಪೂರಕ ಮಾಹಿತಿ ಒದಗಿಸಿದರು. ಇಲ್ಲಿ ಐವರು ಆಶಾ ಕಾರ್ಯಕರ್ತೆಯರು, 1 ಎಎನ್ಎಂ, 1 ವೈದ್ಯರು, ಓರ್ವ ಹೆಲ್ತ್ ಇನ್ಸ್ ಪೆಕ್ಟರ್ ಕಾರ್ಯಾಚರಿಸುತ್ತಿದ್ದು,. ಪ್ರತಿದಿನ 30ರಷ್ಟು ಮನೆಗಳಿಗೆ ಭೇಟಿ ನೀಡಿ ಆರೋಗ್ಯ ವಿಚಾರಣೆಯನ್ನು ನಡೆಸಲಾಗುತ್ತದೆ. ಪ್ರತಿಯೊಂದು ಮನೆಗೂ ಅಗತ್ಯವಸ್ತುಗಳನ್ನು ಪೂರೈಸಲಾಗುತ್ತಿದ್ದು, ಇವುಗಳನ್ನು ಕ್ವಾರಂಟೈನ್ ಅವಧಿ ಮುಗಿಯುವವರೆಗೂ ನಿಗಾ ಇರಿಸಲು ಪಿಡಿಒಗೆ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಸೂಚಿಸಿದರು.