ಬಂಟ್ವಾಳಕ್ಕೆ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಭೇಟಿ, ಪರಿಶೀಲನೆ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಬುಧವಾರ ಬೆಳಗ್ಗೆ ಬಂಟ್ವಾಳ ಪೇಟೆಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಯನ್ನು ಪರಾಮರ್ಶಿಸಿದರು. ಈ ವೇಳೆ ಪುರಸಭೆಯ ಸಹಾಯವಾಣಿಗೂ ಭೇಟಿ ನೀಡಿದ ಅವರು ಅಲ್ಲಿನ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಿದರು. ಈಗಾಗಲೇ ಬಂಟ್ವಾಳ ಪೇಟೆಯ ಹೃದಯಭಾಗದಲ್ಲಿರುವ ಪ್ರದೇಶದಲ್ಲಿ ಕೋವಿಡ್ ನಿಂದ ಒಬ್ಬರು ಮೃತಪಟ್ಟಿದ್ದು, ಮತ್ತೊಬ್ಬರಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆ ಪ್ರದೇಶದ ಸುತ್ತಮುತ್ತಲು ಕಂಟೈನ್ಮೆಂಟ್ ವಲಯ ಎಂದು ಗುರುತಿಸಲಾಗಿದೆ. ಈ ಜಾಗದಲ್ಲಿ ವಾಸಿಸುವ ವಾಸಿಸುವವರಿಗೆ ದೂರವಾಣಿ ಸಂಖ್ಯೆ ಇರುವ ಕರಪತ್ರವನ್ನು ನೀಡಲಾಗಿದ್ದು, ಪುರಸಭೆ ಸಹಾಯವಾಣಿಯ ಸಂಖ್ಯೆಯನ್ನೂ ಒದಗಿಸಲಾಗಿದೆ. ಇದರ ಕಾರ್ಯಚಟುವಟಿಕೆಗಳನ್ನು ಜಿಲ್ಲಾಧಿಕಾರಿ ವೀಕ್ಷಿಸಿ ತೃಪ್ತಿ ವ್ಯಕ್ತಪಡಿಸಿದರು. ಇದೇ ಸಂದರ್ಭ ಕಂಟೈನ್ಮೆಂಟ್ ಪ್ರದೇಶದ ವ್ಯಾಪ್ತಿಯಲ್ಲಿ ಇರುವ ರೇಶನ್ ಅಂಗಡಿಗಳನ್ನು ಅದರ ಹೊರಗಿನ ಭಾಗಕ್ಕೆ ಸ್ಥಳಾಂತರಗೊಳಿಸುವಂತೆ ಅವರು ಸೂಚನೆ ನೀಡಿದರು.

ಜಾಹೀರಾತು

ಪ್ರೊಬೆಶನರಿ ಐಎಎಸ್ ಅಧಿಕಾರಿ ರಾಹುಲ್ ಶಿಂಧೆ,, ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್, ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ ಸರ್ಕಲ್ ಇನ್ಸ್ ಪೆಕ್ಟರ್ ನಾಗರಾಜ್, ಎಸ್ಸೈ ಅವಿನಾಶ್, ಕಂದಾಯ ನಿರೀಕ್ಷಕರಾದ ರಾಮ ಕಾಟಿಪಳ್ಳ, ನವೀನ್ ಬೆಂಜನಪದವು, ವಿಎ ರಾಜು ಲಮಾಣಿ, ಜನಾರ್ದನ ಸಹಿತ ಕಂದಾಯ, ಆರೋಗ್ಯ, ಪುರಸಭೆ, ಪೊಲೀಸ್ ಅಧಿಕಾರಿ, ಸಿಬ್ಬಂದಿ ಈ ಸಂದರ್ಭ ಉಪಸ್ಥಿತರಿದ್ದು ಪೂರಕ ಮಾಹಿತಿ ನೀಡಿದರು.

www.bantwalnews.com Editor: Harish Mambady

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳಕ್ಕೆ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಭೇಟಿ, ಪರಿಶೀಲನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*