ಕೋವಿಡ್-19 ಹತೋಟಿ ವೈದ್ಯರ, ಪೋಲಿಸರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಶಾಸಕರ ನಡವಳಿಕೆ ಹಿನ್ನೆಲೆಯಲ್ಲಿ ಶಾಸಕ ಜಮೀರ್ ಅಹಮ್ಮದ್ ಬಂಧಿಸಿ, ಶಾಸಕತ್ವ ಅನರ್ಹಗೊಳಿಸಬೇಕು ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಬಂಟ್ವಾಳದ ತಾಪಂ ಸದಸ್ಯ ಪ್ರಭಾಕರ ಪ್ರಭು ಮನವಿ ಮಾಡಿದ್ದಾರೆ.
ಬೆಂಗಳೂರು ನಗರದ ಪಾದರಾಯನಪುರದಲ್ಲಿ ಕೊರೊನಾ ಸೋಂಕಿತರನ್ನು ಕ್ವಾರಂಟೈಂನ್ ಗಾಗಿ ಶೋಧನೆ ಮಾಡಲು ಹೋದ ಆರೋಗ್ಯ ಇಲಾಖೆಯ ವೈದ್ಯರು, ಆಶಾ ಕಾರ್ಯಕರ್ತೆಯರು ,ವಿವಿಧ ಇಲಾಖೆಯ ಅಧಿಕಾರಿಗಳು ಸೇರಿದಂತೆ ಮುಖ್ಯವಾಗಿ ನಮ್ಮೆಲ್ಲರ ರಕ್ಸಣೆಯ ಪೋಲಿಸ್ ಅಧಿಕಾರಿಗಳು, ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ ದಾಂಧಲೇ ಮಾಡಿರುವ ಹಿನ್ನೆಲೆಯಲ್ಲಿ ಅಲ್ಲಿನ ಶಾಸಕ ಜಮೀರ್ ಅಹಮದ್ ನಡವಳಿಕೆ ಸರಿಯಲ್ಲ, ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಿ, ತನಿಖೆ ನಡೆಸಬೇಕು ಎಂದು ಒತ್ತಾಯಪಡಿಸಿದ್ದಾರೆ. ಮನವಿಯನ್ನು ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಯಡಿಯೂರಪ್ಪ, ಕೇಂದ್ರ ಗೃಹಮಂತ್ರಿ ಅಮಿತ್ ಶಾ ಅವರಿಗೂ ಸಲ್ಲಿಸಿದ್ದಾರೆ.
Be the first to comment on "ಶಾಸಕ ಜಮೀರ್ ಅಹಮ್ಮದ್ ಬಂಧಿಸಿ, ಶಾಸಕತ್ವ ಅನರ್ಹಗೊಳಿಸಲು ತಾಪಂ ಸದಸ್ಯ ಮನವಿ"