ಬಂಟ್ವಾಳ

ಬಿ.ಸಿ.ರೋಡಿನ ಕೈಕುಂಜೆಯಲ್ಲಿ ಕೊರೊನಾ ಸೋಂಕಿತ ಮಹಿಳೆಯ ಅಂತ್ಯಸಂಸ್ಕಾರ

ಗುರುವಾರ ಕೊರೊನೊ ಸೋಂಕಿನಿಂದ ಮೃತರಾದ ಮಹಿಳೆ ಅಂತ್ಯಸಂಸ್ಕಾರಕ್ಕೆ ಮಂಗಳೂರಿನಲ್ಲಿ ಸ್ಥಳೀಯರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಬಿ.ಸಿ.ರೋಡಿನ ಕೈಕುಂಜೆ ಎಂಬಲ್ಲಿರುವ ಹಿಂದು ರುದ್ರಭೂಮಿಯಲ್ಲಿ ಪೊಲೀಸ್ ಬಂದೋಬಸ್ತ್ ನಲ್ಲಿ ಜಿಲ್ಲಾಡಳಿತ ನಿರ್ದೇಶನದಲ್ಲಿ ತಾಲೂಕಾಡಳಿತ ನಡೆಸಿತು.

ಜಾಹೀರಾತು

ಬಂಟ್ವಾಳ ಪೇಟೆಯ ಮಹಿಳೆ ಮೃತರಾಗಿದ್ದು, ಬಿ.ಸಿ.ರೋಡಿನ ರೈಲ್ವೆ ನಿಲ್ದಾಣ ಬಳಿ ಇರುವ ಗೂಡಿನಬಳಿ ಮತ್ತು ಕೈಕುಂಜೆ ಮಧ್ಯೆ ಇರುವ  ಹಿಂದು ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರವನ್ನು ನಡೆಸಲಾಯಿತು.  ಮಂಗಳೂರಿನಲ್ಲಿ ನಡೆದ ವಿರೋಧದ ವಿಚಾರಗಳನ್ನು ತಿಳಿದ ಸ್ಥಳೀಯರು ಆತಂಕದಿಂದ ಮಹಿಳೆಯರು, ಮಕ್ಕಳ ಸಹಿತ ಸ್ಥಳದಲ್ಲಿ ಜಮಾಯಿಸಿದಾಗ ಪೊಲೀಸರು ಬರಬೇಕಾಯಿತು. ಕೈಕುಂಜೆ ಪೂರ್ವ ಬಡಾವಣೆಯ ಪಕ್ಕದಲ್ಲೇ ಸ್ಮಶಾನವಿದ್ದು, ಇಲ್ಲಿ ದಹನಕ್ರಿಯೆ ನಡೆಯಿತು. 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ