ಬಂಟ್ವಾಳ

ಶವದಹನ ನಡೆಸುವುದು ಪುಣ್ಯಕಾರ್ಯ, ನನ್ನ ಜಾಗದಲ್ಲೇ ಮಾಡಿ ಎಂದು ಹೇಳಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್

ಶವದಹನಕ್ಕೆ ಎಲ್ಲಿಯೂ ಜಾಗ ಸಿಗದೆ ಜಿಲ್ಲಾಡಳಿತ ಪರದಾಡುತ್ತಿದ್ದಾಗ, ಶವಸಂಸ್ಕಾರ ಮಾಡುವುದು ಪುಣ್ಯಕಾರ್ಯ, ತನ್ನ ಜಾಗದಲ್ಲೇ ಮಾಡಬಹುದು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದ್ದು ಈಗ ಸುದ್ದಿಯಾಗುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಎರಡನೇ ಬಲಿಯಾಗಿದೆ. ಎಪ್ರಿಲ್‌ 19 ರಂದು ಮೃತಪಟ್ಟ ಮಹಿಳೆಯ ಸಂಬಂಧಿ ಮಹಿಳೆಯೋರ್ವರು ನಿನ್ನೆ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಕಳೆದ ಭಾನುವಾರ ಮೃತ ಮಹಿಳೆಯ ಶವಸಂಸ್ಕಾರವನ್ನು ಮಂಗಳೂರಿನಲ್ಲಿ ನಡೆಸಿದಾಗ ಸ್ಥಳೀಯವಾಗಿ ಜನರು ಪ್ರತಿಭಟಿಸಿದ್ದು ನಿನ್ನೆ ಮೃತ ಪಟ್ಟ ಮಹಿಳೆಯ ಶವ ಸಂಸ್ಕಾರವು ಜಿಲ್ಲಾಡಳಿತಕ್ಕೆ ಸವಾಲಾಗಿ ಪರಿಣಮಿಸಿತು. ಮಂಗಳೂರಿನ ಎರಡು ಮೂರು ಕಡೆಗಳಲ್ಲಿ ಇದಕ್ಕೆ ವಿರೋಧ ವ್ಯಕ್ತವಾದಾಗ ಆಡಳಿತ ಬಂಟ್ವಾಳದಲ್ಲಿ ಈ ಕಾರ್ಯಕ್ಕೆ ಮುಂದಾದಾಗ ಅಲ್ಲಿಯೂ ವಿರೋಧ ಉಂಟಾದಾಗ ರಾತ್ರಿ ಸುಮಾರು 11 ಗಂಟೆಗೆ ಸ್ಥಳೀಯ ಶಾಸಕ ರಾಜೇಶ್ ನಾಯ್ಕ್ ಅವರನ್ನು ಸಂಪರ್ಕಿಸಿತು. ತಕ್ಷಣವೇ ಮಾನವೀಯತೆ ಮೆರೆದ ಶಾಸಕರು ತನ್ನ ಪತ್ನಿ ಪುತ್ರರಲ್ಲಿ ಮಾತುಕತೆ ನಡೆಸಿ ಸಂಸದ ನಳಿನ್ ಕುಮಾರ್ ಕಟೀಲ್ ರವರಿಗೆ ತಿಳಿಸಿದ ಬಳಿಕ ಶವಸಂಸ್ಕಾರಕ್ಕೆ ಎಲ್ಲಿಯೂ ಅವಕಾಶ ಸಿಗದಲ್ಲಿ ತನ್ನ ಸ್ವಂತ ಸ್ಥಳದಲ್ಲಿ ನಾನು ಅವಕಾಶ ನೀಡತ್ತೇನೆ ಇಲ್ಲಿ ತಂದು ಅಂತ್ಯ ಸಂಸ್ಕಾರ ಮಾಡಬಹುದು. ಯಾಕೆಂದರೆ ಮೃತಮಹಿಳೆ ನನ್ನ ಕ್ಷೇತ್ರ ದವರು. ಶವಸಂಸ್ಕಾರಕ್ಕೂ ಅವಕಾಶ ನೀಡದ ದಯನೀಯ ಸ್ಥಿತಿ ನನ್ನ ಕ್ಷೇತ್ರದ ಮಹಿಳೆಗೆ ಬರಬಾರದು ಎಂದರು. ಆದರೆ  ಕೊನೆಗೆ ಬಿ.ಸಿ.ರೋಡಿನ ಕೈಕುಂಜೆಯಲ್ಲಿರುವ ಸಾರ್ವಜನಿಕ ಹಿಂದು ರುದ್ರಭೂಮಿಯಲ್ಲಿ ಜಿಲ್ಲಾಡಳಿತ, ಪೊಲೀಸ್ ಮತ್ತು ಆರೋಗ್ಯ ಇಲಾಖೆ ಸಹಕಾರದೊಂದಿಗೆ ಶವಸಂಸ್ಕಾರ ನಡೆಸಲಾಯಿತು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts