ಬಂಟ್ವಾಳ

ಬಂಟ್ವಾಳ ತಾಲೂಕಿನಿಂದ ತವರಿಗೆ ಹೊರಟ ವಲಸೆ ಕಾರ್ಮಿಕರು

ಜಾಹೀರಾತು

ಜಾಹೀರಾತು

ಬಾಗಲಕೋಟೆಗೆ ತೆರಳುವ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದಲ್ಲಿದ್ದ 66 ವಲಸೆ ಕಾರ್ಮಿಕರಿಗೆ ನೀರಪಾದೆ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಡಾ. ಚೈತ್ರಾ ಆರೋಗ್ಯ ತಪಾಸಣೆ ನಡೆಸಿಕೊಟ್ಟರು. ಈ ಸಂದರ್ಭ ಪಂಚಾಯಿತಿ ವತಿಯಿಂದ 300 ಗ್ಲೌಸ್, ಸ್ಯಾನಿಟೈಸರ್, ಊಟದ ವ್ಯವಸ್ಥೆ ಮಾಡಿಕೊಡಲಾಯಿತು.

ಬಂಟ್ವಾಳ ತಾಲೂಕಿನ ನಾನಾ ಕಡೆಗಳಲ್ಲಿ ಗ್ರಾಮ ಪಂಚಾಯಿತಿ ಸುಪರ್ದಿಯಲ್ಲಿ 624 ಕಾರ್ಮಿಕರು ಅವರವರ ಊರುಗಳಿಗೆ ತೆರಳುವ ಕಾರ್ಯ ಶನಿವಾರ ರಾತ್ರಿ ನಡೆಯಿತು.ರಾಜ್ಯ ಸರಕಾರದ ಆದೇಶ ಮೇರೆಗೆ ದ.ಕ. ಜಿಲ್ಲಾಡಳಿತದಿಂದ ಇತರ ಜಿಲ್ಲೆಗಳ ವಲಸೆ ಕಾರ್ಮಿಕರನ್ನು ಅವರವರ ಪ್ರದೇಶಗಳಿಗೆ ಸ್ಥಳಾಂತರ ನಡೆಯುತ್ತಿದೆ.

ಪ್ರತಿ ತಾಲೂಕುಗಳಿಂದಲೂ ಕಾರ್ಮಿಕರನ್ನು ಅವರ ತವರು ಪ್ರದೇಶಗಳಿಗೆ ಕಳುಹಿಸಲಾಗುತ್ತಿದೆ. ಅದರಂತೆ ಬಂಟ್ವಾಳದಲ್ಲೂ ಶನಿವಾರ ತಾಲೂಕು ಪಂಚಾಯಿತಿ ಮತ್ತು ತಾಲೂಕಾಡಳಿತವು ಪ್ರತಿ ಗ್ರಾಪಂಗಳಲ್ಲಿರುವ ವಲಸೆ ಕಾರ್ಮಿಕರ ಪಟ್ಟಿಯನ್ನು ಮಾಡಿ, ಆಯಾ ಗ್ರಾಪಂ ವ್ಯಾಪ್ತಿಯಲ್ಲಿ ಆರೋಗ್ಯ ತಪಾಸಣೆಯನ್ನು ಕೈಗೊಂಡು, ಅವರಿಗೆ ಪೂರಕವಾಗಿ ಬೇಕಾದ ವ್ಯವಸ್ಥೆಗಳನ್ನು ಸರ್ಕಾರದ ವತಿಯಿಂದ ಕಲ್ಪಿಸಲಾಯಿತು. ಬಿಜಾಪುರ, ಬಾಗಲಕೋಟೆ, ರಾಯಚೂರು, ಗದಗ ಮೊದಲಾದ ಪ್ರದೇಶಗಳಿಗೆ ತೆರಳುವ ವಲಸೆಕಾರ್ಮಿಕರಿಗೆ ಕೆಎಸ್ಸಾರ್ಟಿಸಿ ಬಿ.ಸಿ.ರೋಡ್ ಬಸ್ ನಿಲ್ದಾಣದಿಂದ ಸುಮಾರು 28 ಬಸ್ಸುಗಳ ವ್ಯವಸ್ಥೆ ಮಾಡಲಾಗಿದ್ದು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಪರಿಶೀಲನೆ ನಡೆಸಿದರು.

ಗದಗಕ್ಕೆ 125, ಬಾಗಲಕೋಟೆಗೆ 252, ಕೊಪ್ಪಳಕ್ಕೆ 88, ಬಿಜಾಪುರಕ್ಕೆ 90 ಮತ್ತು ರಾಯಚೂರಿಗೆ 69 ಮಂದಿಯನ್ನು ಕಳುಹಿಸಲಾಗಿದೆ ಎಂದು ತಾಪಂ ಇಒ ರಾಜಣ್ಣ ತಿಳಿಸಿದ್ದಾರೆ.

ಜಾಹೀರಾತು

ಈ ಸಂದರ್ಭ ಸಹಾಯಕ ಕಮೀಷನರ್ ಮದನ್ ಮೋಹನ್, ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಬುಡಾ ಅಧ್ಯಕ್ಷ ದೇವದಾಸ ಶೆಟ್ಟಿ, ಕಂದಾಯ ಇಲಾಖೆಯ ಆರ್. ಐ.ಗಳಾದ ರಾಮ ಕಾಟಿಪಳ್ಳ, ದಿವಾಕರ್, ನವೀನ್, ಎಸ್.ಐ.ಗಳಾದ ಪ್ರಸನ್ನ, ಅವಿನಾಶ್, ಕೆಎಸ್ಸಾರ್ಟಿಸಿ ಅಧಿಕಾರಿಗಳ ಸಹಿತ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದು, ಕಾರ್ಮಿಕರಿಗೆ ಸರ್ಕಾರದ ನಿರ್ದೇಶನದ ಪ್ರಕಾರ ಕಳುಹಿಸುವ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts