ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋರೋನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಸಭೆ ಬಂಟ್ವಾಳ ಪ್ರವಾಸಿ ಬಂಗ್ಲೆಯಲ್ಲಿ ಭಾನುವಾರ ಮಧ್ಯಾಹ್ನ ನಡೆದಿದ್ದು, ಅಗತ್ಯವೆನಿಸಿದರೆ ಜಿಲ್ಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸೂಚಿಸಿದರು.
ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ರಾಜೇಶ್ ನಾಯ್ಕ್, ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ತಹಸೀಲ್ದಾರ್ ರಶ್ಮಿ ಎಸ್.ಆರ್, ತಾಪಂ ಇಒ ರಾಜಣ್ಣ, ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ, ತಾಲೂಕುಆರೋಗ್ಯ ಅಧಿಕಾರಿ ಡಾ. ದೀಪಾ ಪ್ರಭು, ಪೊಲೀಸ್ ಸಿ.ಐ. ನಾಗರಾಜ್ ಸಹಿತ ಉನ್ನತ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.
ಸಭೆಯ ಮುಖ್ಯಾಂಶಗಳು ಇವು
- ಬಂಟ್ವಾಳದಲ್ಲಿ ಮೇ 3ರವರೆಗೆ ಲಾಕ್ ಡೌನ್‌ನಲ್ಲಿ ಯಾವುದೇ ವಿನಾಯಿತಿ ಇಲ್ಲ. ಕಸಬಾ ಹೋಬಳಿಯ 92 ಮನೆಗಳು ಹಾಗೂ ನರಿಕೊಂಬು ಗ್ರಾಮಪಂಚಾಯತ್ ವ್ಯಾಪ್ತಿಯ 213 ಮನೆಗಳಲ್ಲಿ ಪ್ರತಿನಿತ್ಯ ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಸಿಬ್ಬಂದಿಗಳು ಭೇಟಿಕೊಟ್ಟು ವರದಿ ನೀಡಬೇಕು. ಬಂಟ್ವಾಳ ಕಸಬಾ ಹಾಗೂ ನರಿಕೊಂಬು ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಲಾಕ್ ಡೌನ್ ನಲ್ಲಿ ಯಾವುದೇ ವಿನಾಯಿತಿ ಇಲ್ಲ
- ದ.ಕ. ಜಿಲ್ಲೆಯಲ್ಲಿ ಒಟ್ಟು 19 ಕೋವಿಡ್ ಪ್ರಕರಣಗಳು ವರದಿಯಾಗಿದ್ದು ಇದರಲ್ಲಿ 12 ಪ್ರಕರಣಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಿರುತ್ತಾರೆ. ಇಬ್ಬರು ಸಾವನ್ನಪ್ಪಿದ್ದು, ಉಳಿದ ಪ್ರಕರಣಗಳಲ್ಲಿ ನಿಗಾವಹಿಸಲಾಗಿದೆ
ಫಸ್ಟ್ ನ್ಯೂರೋ ಆಸ್ಪತ್ರೆಯ 198 ಸಿಬ್ಬಂದಿಗಳು ಹಾಗೂ ಇನ್ನಿತರರನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ. ಈ ಪೈಕಿ 49 ಪ್ರಕರಣಗಳ ವರದಿ ಬಂದಿದ್ದು, 48 ನೆಗೆಟಿವ್ ಒಂದು ಪಾಸಿಟಿವ್ ಆಗಿರುತ್ತದೆ. - ಜಿಲ್ಲಾಡಳಿತದ ಪೂರ್ಣ ಕಣ್ಗಾವಲಿನಲ್ಲಿ ಕೋರೋನ ನಿಯಂತ್ರಣ ಮಾಡಲಾಗುತ್ತಿದೆ. ಸಾರ್ವಜನಿಕರು ಯಾವುದೇ ಕಾರಣಕ್ಕೆ ಘಟನೆಗಳನ್ನು ಲಘುವಾಗಿ ತೆಗೆದು ಕೊಳ್ಳದೆ, ಸ್ವಯಂ ಪ್ರೇರಿತ ಕರ್ಫ್ಯೂಗೆ ಒಳಪಡಬೇಕು ಅನಿವಾರ್ಯವಾದರೆ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ
ಬಂಟ್ವಾಳ ಕಸಬಾ ಹಾಗೂ ನರಿಕೊಂಬು ಗ್ರಾಮ ಪಂಚಾಯತ್ ವ್ಯಾಪ್ತಿ ಸೀಲ್ಡ್ ಡೌನ್ ಮಾಡಲಾಗಿದ್ದು, ವಿಶೇಷ ಅಧಿಕಾರಿಗಳನ್ನು ನೇಮಕ ಮಾಡಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಕಂಟ್ರೋಲ್ ರೂಮ್ ತೆರೆದು ಸಾರ್ವಜನಿಕರ ಅನುಕೂಲಕ್ಕೆ ದೂರವಾಣಿ ಸಂಪರ್ಕ ನೀಡಲಾಗಿದೆ. - 11 ಅಧಿಕಾರಿಗಳನ್ನು ಈ ಪ್ರದೇಶಗಳಲ್ಲಿ ಹಗಲು-ರಾತ್ರಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಸಾರ್ವಜನಿಕರು ಮನೆಯಲ್ಲಿದ್ದುಕೊಂಡು ಅಗತ್ಯ ಸಾಮಾಗ್ರಿಗಳನ್ನು ತೆಗೆದುಕೊಳ್ಳಬಹುದು.
ದಿನಸಿ ಸಾಮಗ್ರಿ, ಹಾಲು ದಿನಪತ್ರಿಕೆ, ಔಷಧಿ, ಊಟೋಪಚಾರ ತರಕಾರಿ ಹಣ್ಣು ಮಾಂಸಗಳನ್ನು ಸಾರ್ವಜನಿಕರ ಬೇಡಿಕೆಯಂತೆ ಒದಗಿಸಲು ಹಾಗೂ ಬ್ಯಾಂಕಿಂಗ್ ಸೇವೆ ಗ್ಯಾಸ್ ಇನ್ನಿತರ ಸೇವೆ ತುರ್ತು ಸೇವೆಗಳನ್ನು ಒದಗಿಸಲು ಅಧಿಕಾರಿಗಳ ತಂಡ ರಚನೆ
Harish Mambady2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ