ಬಂಟ್ವಾಳ

2 ಸಾವಿರ ಬಡ ಕುಟುಂಬಕ್ಕೆ ವೈಯಕ್ತಿಕ ನೆಲೆಯಲ್ಲಿ ಅಕ್ಕಿ ವಿತರಣೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಚಾಲನೆ

ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಸುಮಾರು ೨ ಸಾವಿರಕ್ಕೂ ಮಿಕ್ಕಿ ಬಡ ಕುಟುಂಬಗಳಿಗೆ ವೈಯಕ್ತಿಕ ನೆಲೆಯಲ್ಲಿ ಅಕ್ಕಿಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಒದಗಿಸುವ ಸಂಕಲ್ಪ ಮಾಡಿದ್ದು, ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ದೊರಕಿತು.

ಜಾಹೀರಾತು

ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತಿಯೊಂದರಲ್ಲಿ ಗ್ರಾಮ ಪಂಚಾಯತ್ ಕಾರ್ಯಪಡೆಯ ಸಭೆ ನಡೆಸಿದ ಸಂದರ್ಭ ಯಾವುದೇ ಪಡಿತರ ಚೀಟಿ ಹೊಂದಿರದ ಬಡ ಕಟುಂಬಗಳ ಸಮಸ್ಯೆಯು ಶಾಸಕರ ಗಮನೆಕ್ಕೆ ಬಂದಿದ್ದು, ಕೂಡಲೇ ಶಾಸಕರು ಬಂಟ್ವಾಳ ತಾಲೂಕು ಕಾರ್ಯ ನಿರ್ವಹಣಾಧಿಕಾರಿ ರಾಜಣ್ಣ ಅವರನ್ನು ಸಂಪರ್ಕಿಸಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಪಡಿತರ ಚೀಟಿ ಹೊಂದಿರ ಕುಟುಂಬಗಳ ಪಟ್ಟಿ ಮಾಡಿ ನೀಡುವಂತೆ ಸೂಚಿದರು. ಅದರಂತೆ2  ಸಾವಿರಕ್ಕೂ ಮಿಕ್ಕಿ ಬಡ ಕುಟುಂಬಗಳ ಪಟ್ಟಿ ಶಾಸಕರಿಗೆ ಸಲ್ಲಿಕೆಯಾಗಿದ್ದು, ಶಾಸಕರು ತಮ್ಮ ವೈಯಕ್ತಿಕ ನೆಲೆಯಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ 2 ಸಾವಿರ ಮಿಕ್ಕಿ ಕುಟುಂಬಗಳಿಗೆ ಅಕ್ಕಿ ನೀಡುವ ಕಾರ್ಯಕ್ರಮಕ್ಕೆ ತಮ್ಮ ಕಚೇರಿಯಲ್ಲಿ ಸೋಮವಾರ ಚಾಲನೆ ನೀಡಿದರು.

ಬೂಡ ಅಧ್ಯಕ್ಷರಾದ ದೇವದಾಸ್ ಶೆಟ್ಟಿ, ಜಿಪಂ ಸದಸ್ಯ ರವೀಂದ್ರ ಕಂಬಳಿ,  ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿಗಳಾದ, ಡೊಂಬಯ್ಯ ಅರಳ, ಉಪಾಧ್ಯಕ್ಷರಾದ ವಜ್ರನಾಥ ಕಲ್ಲಡ್ಕ, ಮತ್ತು ಉಮೇಶ್ ಅರಳ, ಕಾರ್ತಿಕ್ ಬಲ್ಲಾಳ್, ಸುದರ್ಶನ್ ಬಜ, ಪ್ರಮೋದ್ ಅಜ್ಚಿಬೆಟ್ಟು, ಶ್ರೀಕಾಂತ್ ಶೆಟ್ಟಿ ಸಜಿಪ , ಗಣೇಶ್ ರೈ ಮಾಣಿ, ಪುರುಷೋತ್ತಮ ಶೆಟ್ಟಿ ವಾಮದಪದವು, ಯಶವಂತ ನಗ್ರಿ, ಜಯರಾಮ್ ನಾಯ್ಕ್ ಕೊಳ್ನಾಡು, ಪ್ರಕಾಶ್ ಅಂಚನ್, ಸೀತಾರಾಮ ಪೂಜಾರಿ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts