ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ (ಏ.28) ಯಾವುದೇ ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿಲ್ಲ. ಇದುವರೆಗೆ ಜಿಲ್ಲೆಯಲ್ಲಿ 2593 ಮಂದಿಯ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೊಳಪಡಿಸಲಾಗಿದ್ದು, ಇವುಗಳ ಪೈಕಿ 2057 ರಿಪೋರ್ಟ್ ಬಂದಿವೆ. 2036 ನೆಗೆಟಿವ್ ಆಗಿದ್ದು, 21 ಪಾಸಿಟಿವ್ ದೊರಕಿದೆ. ಇವರ ಪೈಕಿ ಇಬ್ಬರು ಸಾವನ್ನಪ್ಪಿದ್ದು, 12 ಮಂದಿ ಡಿಸ್ಚಾರ್ಜ್ ಮಾಡಲಾಗಿದೆ. 7 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿರುವ ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ದಕ್ಷಿಣ ಕನ್ನಡದವರಲ್ಲದ 6 ಪ್ರಕರಣಗಳು ಇಲ್ಲಿ ವರದಿಯಾಗಿದ್ದು, ಅವುಗಳ ಪೈಕಿ 4 ಕೇರಳ, 1 ಉಡುಪಿ ಮತ್ತು 1 ಭಟ್ಕಳಕ್ಕೆ ಸೇರಿದವರು. ದಕ್ಷಿಣ ಕನ್ನಡ ಜಿಲ್ಲೆಯ 15 ಮಂದಿ ಕೊರೊನಾದಿಂದ ಬಾಧಿತರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.