ಬಂಟ್ವಾಳ: ಬಂಟ್ವಾಳ ಜೈನ್ ಮಿಲನ್, ಶ್ರೀದೇವಿ ಮೆಡಿಕಲ್ಸ್ ಸಹಯೋಗದಲ್ಲಿ ಬಂಟ್ವಾಳದ ಮೂರು ಪೊಲೀಸ್ ಠಾಣೆಗಳಿಗೆ ತೆರಳಿ, ಸಿಬ್ಬಂದಿಗೆ ಬೇಕಾದ ಮಾಸ್ಕ್, ಗ್ಲೌಸ್, ಸ್ಯಾನಿಟೈಸರ್ ವಿತರಿಸಲಾಯಿತು.
ವೃತ್ತ ನೀರಿಕ್ಷಕ ಟಿ.ಡಿ ನಾಗರಾಜ್, ಬಂಟ್ವಾಳ ನಗರ ಠಾಣೆಗೆ ಎಸ್.ಐ. ಅವಿನಾಶ್, ಸಂಚಾರಿ ಠಾಣೆಗೆ ಎಸ್.ಐ. ರಾಜೇಶ್ ಕೆ.ವಿ ಅವರಿಗೆ ಪದಾಧಿಕಾರಿಗಳು ನೀಡಿದರು. ಸಂದರ್ಭದಲ್ಲಿ ಭಾರತೀಯ ಜೈನ್ ಮಿಲನ್ ವಲಯ 8, ಮಂಗಳೂರು ವಿಭಾಗದ ಅಧ್ಯಕ್ಷ ಸುದರ್ಶನ್ ಜೈನ್, ಕಾರ್ಯದರ್ಶಿ ಸುಭಾಷ್ ಚಂದ್ರ ಜೈನ್, ಬಂಟ್ವಾಳ ಜೈನ್ ಮಿಲನ್ ಅಧ್ಯಕ್ಷ ಡಾ.ಸುದೀಪ್ ಕುಮಾರ್, ಕಾರ್ಯದರ್ಶಿ ಸನ್ಮತಿ ಜಯಕೀರ್ತಿ, ಉಪಾಧ್ಯಕ್ಷ ಹರ್ಷರಾಜ್ ಬಲ್ಲಾಳ್ ಉಪಸ್ಥಿತರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…