ಕೋವಿಡ್-19 ಗೆ ಸಂಬಂಧಿಸಿ ಒಟ್ಟು 390 ಸ್ಯಾಂಪಲ್ ಗಳ ವರದಿ ಬಂದಿದ್ದು ಎಲ್ಲವೂ ನೆಗೆಟಿವ್ ಆಗಿರುತ್ತದೆ ಎಂದು ಜಿಲ್ಲಾಧಿಕಾರಿ ಸಿಂದೂ ರೂಪೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಂಟ್ವಾಳ ಕಸಬಾ ನಿವಾಸಿ ಮಹಿಳೆ ಆರೋಗ್ಯದ ಸ್ಥಿತಿ ಗಂಭೀರವಾಗಿದೆ ಎಂದು ವೆನ್ಲಾಕ್ ಆಸ್ಪತ್ರೆ ಜಿಲ್ಲಾ ಸರ್ಜನ್ ತಿಳಿಸಿದ್ದಾರೆ. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ವೆಂಟಿಲೇಟರ್ ಅಳವಡಿಸಲಾಗಿದ್ದು, ಅಲ್ಲಿಯೇ ಚಿಕಿತ್ಸೆ ನೀಡಲಾಗಿದೆ ಎಂದಿದ್ದಾರೆ.
ಇನ್ನು 394 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರಲು ಬಾಕಿ ಇದೆ. 248 ಮಂದಿಯ ಸ್ಯಾಂಪಲ್ ಗಳನ್ನು ಬುಧವಾರ ತೆಗೆದುಕೊಳ್ಳಲಾಗಿದೆ. 12 ಮಂದಿ ನಿಗಾದಲ್ಲಿದ್ದಾರೆ ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಇಂದು ಯಾವುದೇ ಕೊರೊನಾ ಪಾಸಿಟಿವ್ ಕೇಸ್ ಇಲ್ಲ, 390 ಮಂದಿಯ ರಿಪೋರ್ಟ್ ಗಳೂ ನೆಗೆಟಿವ್"