ಕೋವಿಡ್-19 ಗೆ ಸಂಬಂಧಿಸಿ ಒಟ್ಟು 390 ಸ್ಯಾಂಪಲ್ ಗಳ ವರದಿ ಬಂದಿದ್ದು ಎಲ್ಲವೂ ನೆಗೆಟಿವ್ ಆಗಿರುತ್ತದೆ ಎಂದು ಜಿಲ್ಲಾಧಿಕಾರಿ ಸಿಂದೂ ರೂಪೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಂಟ್ವಾಳ ಕಸಬಾ ನಿವಾಸಿ ಮಹಿಳೆ ಆರೋಗ್ಯದ ಸ್ಥಿತಿ ಗಂಭೀರವಾಗಿದೆ ಎಂದು ವೆನ್ಲಾಕ್ ಆಸ್ಪತ್ರೆ ಜಿಲ್ಲಾ ಸರ್ಜನ್ ತಿಳಿಸಿದ್ದಾರೆ. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ವೆಂಟಿಲೇಟರ್ ಅಳವಡಿಸಲಾಗಿದ್ದು, ಅಲ್ಲಿಯೇ ಚಿಕಿತ್ಸೆ ನೀಡಲಾಗಿದೆ ಎಂದಿದ್ದಾರೆ.
ಇನ್ನು 394 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರಲು ಬಾಕಿ ಇದೆ. 248 ಮಂದಿಯ ಸ್ಯಾಂಪಲ್ ಗಳನ್ನು ಬುಧವಾರ ತೆಗೆದುಕೊಳ್ಳಲಾಗಿದೆ. 12 ಮಂದಿ ನಿಗಾದಲ್ಲಿದ್ದಾರೆ ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…