ಬಂಟ್ವಾಳ

ಮಾಜಿ ಸೈನಿಕ ತನ್ನ ಮನೆಯಲ್ಲೇ ಶವವಾಗಿ ಪತ್ತೆ

ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮದ ಕಲ್ಲೊಟ್ಟು ಮನೆ ನಿವಾಸಿ ರಿಚಾರ್ಡ್ ಫೆರ್ನಾಂಡೀಸ್ (50) ಎಂಬ ಮಾಜಿ ಸೈನಿಕ ಅವರ ಶವ ಕೊಳೆತ ಸ್ಥಿತಿಯಲ್ಲಿ ಅವರ ಮನೆಯಲ್ಲಿಯೇ ಬುಧವಾರ ಬೆಳಗ್ಗೆ ಪತ್ತೆಯಾಗಿದೆ.

ಜಾಹೀರಾತು

ಅವಿವಾಹಿತರಾಗಿದ್ದ ಇವರ ಅವಿವಾಹಿತ ಸಹೋದರಿಯರಿಬ್ಬರೂ ಮಾನಸಿಕ ಅಸ್ವಸ್ಥರಾಗಿದ್ದು ಹೀಗಾಗಿ ಸಹೋದರ ಮೃತಪಟ್ಟಿರುವ ಕುರಿತು ಅವರಿಗೂ ಗೊತ್ತಾಗಲಿಲ್ಲ, ಸಮೀಪದ ಮನೆಯವರು ಅನುಮಾನಗೊಂಡು ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ ಸಮೀಪದ ಡೈರಿಗೆ ಹಾಲು ತರಲು ಹೋದವರು ಮತ್ತೆ ಉಳಿದ ದಿನಗಳಲ್ಲಿ ಕಾಣದ ಕಾರಣ ಅನುಮಾನಗೊಂಡು ಸಮೀಪದ ಮನೆಯವರು ರಿಚಾರ್ಡ್ ಅವರ ಮನೆಗೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಎಸ್.ಐ. ಪ್ರಸನ್ನ ನೇತೃತ್ವದಲ್ಲಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು..  ಸುಮಾರು ನಾಲ್ಕು ದಿನಗಳ ಹಿಂದೆಯೇ ಇವರು ಮೃತರಾಗಿದ್ದಿರಬಹುದಾದ ಶಂಕೆ ಇದ್ದು, ಅಸಹಜ ಸಾವು ಎಂದು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲೊರೆಟ್ಟೋ ಚರ್ಚ್ ಧರ್ಮಗುರುಗಳು ಮತ್ತು ಚರ್ಚ್ ಪಾಲನಾ ಮಂಡಳಿ ಸದಸ್ಯರು ಕ್ಯಾಥೊಲಿಕ್ ವಿಧಿ ವಿಧಾನ ಪ್ರಕಾರ ಅಂತ್ಯಸಂಸ್ಕಾರ ನೆರವೇರಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ