ಜಿಲ್ಲಾ ಸುದ್ದಿ

ಕೌಟುಂಬಿಕ ಕಾರಣ, ಅಂತರ್ ಜಿಲ್ಲಾ ಪ್ರಯಾಣ – ಪರಿಶೀಲನೆ: ಸಚಿವ ಕೋಟ

ಲಾಕ್ ಡೌನ್‍ನಿಂದಾಗಿ ತಮ್ಮ ಕುಟುಂಬ ಸೇರಲಾಗದೆ ಬಾಕಿಯಾಗಿರುವವರಿಗೆ ಅಂತರ್ ಜಿಲ್ಲಾ ಪ್ರಯಾಣಕ್ಕೆ ಅನುಮತಿ ನೀಡುವ ಸಂಬಂಧ ಒಂದೆರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮೊದಲ ಹಂತದಲ್ಲಿ ವಲಸೆ ಕಾರ್ಮಿಕರಿಗೆ ತಮ್ಮ ಗ್ರಾಮಗಳಲ್ಲಿ ಕೃಷಿ ಕಾರ್ಯ ಕೈಗೊಳ್ಳಲು ಅಥವಾ ತಮ್ಮ ಕೆಲಸದ ಸ್ಥಳಗಳಿಗೆ ತಲುಪುವ ಸಲುವಾಗಿ ಅವರನ್ನು ಸ್ವಗ್ರಾಮಗಳಿಗೆ ತಲುಪಿಸಲು ರಾಜ್ಯ ಸರಕಾರ ಅನುಮತಿ ನೀಡಿದೆ. ಇದರಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಿಂದಲೂ ವಲಸೆ ಕಾರ್ಮಿಕರು ತಮ್ಮ ಜಿಲ್ಲೆಗೆ ತೆರಳಲು ಜಿಲ್ಲಾಡಳಿತ ಅಗತ್ಯ ಕ್ರಮ  ಕೈಗೊಂಡಿದೆ. ಈಗಾಗಲೇ ಮಂಗಳೂರು ಹೊರತುಪಡಿಸಿ ಉಳಿದ ತಾಲೂಕುಗಳಿಂದ ವಲಸೆ ಕಾರ್ಮಿಕರನ್ನು ಕಳುಹಿಸುವ ಪ್ರಕ್ರಿಯೆ ಪೂರ್ಣಗೊಂಡಿದೆ. ಸುಮಾರು 4000 ಮಂದಿ ಈಗಾಗಲೇ ತೆರಳಿದ್ದಾರೆ. ಮಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಇನ್ನು 3-4 ದಿನಗಳೊಳಗೆ ಇದು ಪೂರ್ಣಗೊಳ್ಳಲಿದೆ ಎಂದು ಸಚಿವರು ತಿಳಿಸಿದರು.

ಎರಡನೇ ಹಂತದಲ್ಲಿ ಜಿಲ್ಲೆಯಲ್ಲಿ ಲಾಕ್‍ಡೌನ್‍ನಿಂದ ಉಳಿದುಕೊಂಡು, ಬೇರೆ ಜಿಲ್ಲೆಯಲ್ಲಿರುವ ಕುಟುಂಬವನ್ನು ಸೇರಲಾದವರಿಗೆ ಆದ್ಯತೆ ನೀಡಲಾಗುವುದು. ಈ ಬಗ್ಗೆ ಸರಕಾರದ ಪರಿಶೀಲನೆಯಲ್ಲಿದೆ ಎಂದು ಸಚಿವರು ತಿಳಿಸಿದರು.

ವಿದೇಶದಲ್ಲಿರುವ ಜಿಲ್ಲೆಯ ನಾಗರೀಕರನ್ನು ಇಲ್ಲಿಗೆ ಕರೆತರುವ ಬಗ್ಗೆ ಮಾಹಿತಿ ಇದ್ದು, ಈ ಬಗ್ಗೆ ಎಲ್ಲಾ ಸಿದ್ಧತೆಗಳನ್ನು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಕೋವಿಡ್‍ನಿಂದ ಮೃತಪಟ್ಟವರನ್ನು ಮಂಗಳೂರಿನ ಬೋಳೂರು ವಿದ್ಯುತ್ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನಡೆಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಯಾವುದೇ ಗೊಂದಲಗಳು ಬೇಡ. ಸಾಮಾನ್ಯ ರೋಗಿಗಳನ್ನು ಕ್ಲಿನಿಕ್, ಆಸ್ಪತ್ರೆ, ನರ್ಸಿಂಗ್ ಹೋಂಗಳಲ್ಲಿ ಯಾವರೀತಿ ಚಿಕಿತ್ಸೆ ನೀಡಬೇಕು ಎಂಬುದರ ಬಗ್ಗೆ ಸರಕಾರ ಮಾರ್ಗದರ್ಶನ ಕಳುಹಿಸಲಿದೆ ಎಂದು ಸಚಿವ ಶ್ರೀನಿವಾಸ ಪೂಜಾರಿ ತಿಳಿಸಿದರು.

ಸಭೆಯಲ್ಲಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲು, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಶಾಸಕರಾದ ಹರೀಶ್ ಪೂಂಜಾ, ಯು.ಟಿ. ಖಾದರ್, ಅಂಗಾರ, ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಹರೀಶ್ ಕುಮಾರ್, ಐವನ್ ಡಿಸೋಜ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪೊನ್ನುರಾಜ್, ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ಪೊಲೀಸ್ ಕಮೀಷನರ್ ಡಾ. ಪಿ.ಎಸ್. ಹರ್ಷ ಮತ್ತಿತರರು ಇದ್ದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ