ಸಾರ್ವಜನಿಕ ಹಿತಾದೃಷ್ಟಿಯಿಂದ ಕೋವಿಡ್-19 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂದಿನ ಆದೇಶದವರೆಗೂ ಪಾನ್ ಮಸಾಲ, ಜರ್ದಾ, ಖೈನಿ,ಮುಂತಾದ ಜಗಿಯುವ ತಂಬಾಕು ಉತ್ಪನ್ನಗಳನ್ನು ಅಂಗಡಿಗಳಲ್ಲಿ ಮಾರಾಟ ಮಾಡುವುದು ಮತ್ತು ಸಾರ್ವಜನಿಕರು ಬಳಸುವುದನ್ನು ನಿಷೇಧಿಸಲಾಗಿದೆ.
ಒಂದು ವೇಳೆ ಉಲ್ಲಂಘನೆಯಾದಲ್ಲಿ ಸಾಂಕ್ರಾಮಿಕ ರೋಗಗಳ ಕಾಯಿದೆ-1897, ವಿಪತ್ತು ನಿರ್ವಹಣಾ ಕಾಯಿದೆ-2005, ಐಪಿಸಿ-188,268,269 ಮತ್ತು 270 ಅಡಿಯಲ್ಲಿ ಪ್ರಕರಣ ದಾಖಲಿಸಿ ಸಂಬಂಧಿಸಿದವರ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು, ಹಾಗೂ ಅಧ್ಯಕ್ಷರು, ಜಿಲ್ಲಾ ತಂಬಾಕು ನಿಯಂತ್ರಣ ಸಮನ್ವಯ ಸಮಿತಿ ದ.ಕ ಇವರ ಪ್ರಕಟಣೆ ತಿಳಿಸಿದೆ.
ಕೋವಿಡ್-19 ರೋಗವು ವಿಶ್ವದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿದ್ದು, ಪಾನ್ ಮಸಾಲ, ಜರ್ದಾ, ಖೈನಿ, ಇತ್ಯಾದಿ ಜಗಿಯುವ ತಂಬಾಕು ಪದಾರ್ಥಗಳನ್ನು ಬಳಕೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುವ ಜೊತೆಗೆ ಸಾಂಕ್ರಾಮಿಕ ರೋಗಗಳಾದ ಕ್ಷಯರೋಗ, ನ್ಯುಮೋನಿಯ ಮತ್ತು ಕೋವಿಡ್-19 ವೈರಸ್ ಒಬ್ಬರಿಂದ ಮತ್ತೊಬ್ಬರಿಗೆ ಹರಡಲು ಕಾರಣವಾಗಬಹುದು.
ಬೀಡಿ, ಸಿಗರೇಟ್ ಸೇದುವುದರಿಂದ ಕೈಯಿಂದ ಬಾಯಿಯ ಮೂಲಕ ವೈರಸ್‍ಗಳು ಮಾನವನ ದೇಹವನ್ನು ಪ್ರವೇಶಿಸುವ ಸಾಧ್ಯತೆ ಇರುವುದರಿಂದ ಹಾಗೂ ದೇಹದ ಇತರೆ ಭಾಗಗಳಿಗೆ ಸೋಂಕು ಹರಡಿ ಶ್ವಾಸಕೋಶ, ಹೃದಯ ಸಂಬಂಧಿತ ಕಾಯಿಲೆಗಳು ಬರಬಹುದು.