ಮಂಗಳೂರಿನ ಬೋಳೂರು ಪ್ರದೇಶದ 58 ವರ್ಷದ ಮಹಿಳೆಗೆ ಕೊರೊನಾ ಸೋಂಕು ದೃಢಪಟ್ಟಿರುವುದನ್ನು ಗುರುವಾರ ಖಚಿತಪಡಿಸಲಾಗಿದ್ದು, ಇದರೊಂದಿಗೆ ದಕ್ಷಿಣ ಕನ್ನಡದಲ್ಲಿ ಪರೀಕ್ಷೆ ನಡೆಸಿದ ಕೋವಿಡ್ ಸೋಂಕಿತರ ಸಂಖ್ಯೆ 22ಕ್ಕೇರಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯವರ ಸಂಖ್ಯೆ 16ಕ್ಕೆ ಏರಿದಂತಾಗಿದೆ. ಅನ್ಯರಾಜ್ಯ ಜಿಲ್ಲೆಗಳ ಒಟ್ಟು 6 ಮಂದಿ (ಭಟ್ಕಳ 1, ಉಡುಪಿ 1, ಕೇರಳ 4) ಮತ್ತು ದಕ್ಷಿಣ ಕನ್ನಡ ಜಿಲ್ಲೆಯ 16 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಂತಾಗಿದೆ.
16 ಮಂದಿಯಲ್ಲಿ ಬಂಟ್ವಾಳ ತಾಲೂಕಿನ ಒಟ್ಟು 7 ಪ್ರಕರಣಗಳಿದ್ದು, ಅವರ ಪೈಕಿ ಇಬ್ಬರು ಸಾವನ್ನಪ್ಪಿದ್ದಾರೆ. ಇದೀಗ ಮಂಗಳೂರಿನ 3, ಬಂಟ್ವಾಳದ 3 ಮತ್ತು ಉಪ್ಪಿನಂಗಡಿಯ 2 ಒಟ್ಟು 8 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಹೆಚ್ಚಾದ ಕೊರೊನಾ ಸೋಂಕಿತರು, ಮಂಗಳೂರು ನಿವಾಸಿಗೆ ಪಾಸಿಟಿವ್"