ಬಂಟ್ವಾಳ

ಬಂಟ್ವಾಳಕ್ಕೆ ಮತ್ತೆ ಕೊರೊನಾ ಆಘಾತ, ಇಂದು ಮತ್ತೊಂದು ಪಾಸಿಟಿವ್ ಕೇಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ.1ರಂದು ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಬಂಟ್ವಾಳದ ಒಬ್ಬರು ಮತ್ತು ಮಂಗಳೂರಿನ ಒಬ್ಬರಿಗೆ ಕೊರೊನಾ ದೃಢಪಟ್ಟಿದೆ.

ಜಾಹೀರಾತು

ಬಂಟ್ವಾಳ ಎಸ್.ವಿ.ಎಸ್. ಶಾಲಾ ಓಣಿ ರಸ್ತೆ ನಿವಾಸಿ ಸುಮಾರು 70 ವರ್ಷದ ವ್ಯಕ್ತಿಯೋರ್ವರಿಗೆ ಸೋಂಕು ತಗಲಿರುವುದು ದೃಢಪಟ್ಟಿದ್ದು, ಇವರು ರೋಗಿ ಸಂಖ್ಯೆ 390ರ ದ್ವಿತೀಯ ಸಂಪರ್ಕ ಹೊಂದಿದವರು ಎಂದು ತಿಳಿದುಬಂದಿದೆ. ಇದರೊಂದಿಗೆ ಬಂಟ್ವಾಳ ಪೇಟೆಯಲ್ಲಿ ಒಟ್ಟು 5 ಮಂದಿಗೆ ಕೋವಿಡ್ ದೃಢಪಟ್ಟ ಪ್ರಕರಣ ವರದಿಯಾದಂತಾಗಿದ್ದು, ಇವರಲ್ಲಿ ಒಂದೇ ಮನೆಯ ಅತ್ತೆ, ಸೊಸೆ ಸಾವನ್ನಪ್ಪಿದರೆ, ಪಕ್ಕದ ಮನೆಯ ತಾಯಿ ಮೃತಪಟ್ಟಿದ್ದು, ಮಗಳು ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರ ಸೋಂಕು ತಗಲಿದ ವ್ಯಕ್ತಿ ಏ.19ರಂದು ದೃಢಪಟ್ಟು ಮೃತರಾದ ಮಹಿಳೆಯ ದ್ವಿತೀಯ ಸಂಪರ್ಕದವರು ಎಂದು ಹೇಳಲಾಗುತ್ತಿದೆ. ಹತ್ತಿರದ ಬೀದಿಗಳಲ್ಲಿ ವಾಸಿಸುವ ಈ 70ರ ಹರೆಯದ ವೃದ್ಧರಿಗೆ ಸೋಂಕು ತಗಲಿದ ಬಳಿ ಬಂಟ್ವಾಳದಲ್ಲಿ ಆತಂಕ ಮನೆ ಮಾಡಿದೆ.

ಬಂಟ್ವಾಳ ತಾಲೂಕಿನಲ್ಲಿ ಒಟ್ಟು 8 ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಇವುಗಳ ಪೈಕಿ 3 ಸಾವನ್ನಪ್ಪಿದರೆ, 2 ಮಂದಿ ಗುಣಮುಖರಾಗಿದ್ದಾರೆ. 3 ಮಂದಿ ಈಗ ಚಿಕಿತ್ಸೆ ಪಡೆಯುತ್ತಿದ್ದು,  ಅವರಲ್ಲಿ ಬಂಟ್ವಾಳ ಪೇಟೆಯ 2 ಮತ್ತು ನರಿಕೊಂಬು ನಾಯಿಲದ ಒಬ್ಬರು ಸೇರಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

17 hours ago