ಫರಂಗಿಪೇಟೆ

ಕೊರೋನ ವೈರಸ್ ನಿಯಂತ್ರಣದಲ್ಲಿ ಕಾರ್ಮಿಕರ ಸಹಕಾರ ಅಪಾರ: ಯು.ಟಿ.ಖಾದರ್

  • ಫರಂಗಿಪೇಟೆಯಲ್ಲಿ ಆಟೋ ರಿಕ್ಷಾ, ಗೂಡ್ಸ್ ವಾಹನ, ಪ್ರವಾಸಿ ಕಾರುಗಳ ಚಾಲಕರಿಗೆ ದಿನಸಿ, ತರಕಾರಿ ಕಿಟ್ ವಿತರಣೆ

ಲಾಕ್‍ಡೌನ್‍ನಿಂದಾಗಿ ಒಂದೂವರೆ ತಿಂಗಳಿನಿಂದ ಕೆಲಸವಿಲ್ಲದೆ ಕುಟುಂಬದ ನಿರ್ವಾಹಣೆ ಹಾಗೂ ಊಟಕ್ಕೆ ಕಷ್ಟವಾದರೂ ಕೊರೋನ ವೈರಸ್ ಹರಡುವುದನ್ನು ನಿಯಂತ್ರಿಸಲು ಆಟೋ ರಿಕ್ಷಾ, ಗೂಡ್ಸ್ ವಾಹನ, ಪ್ರವಾಸಿ ಕಾರುಗಳ ಚಾಲಕರು ಹಾಗೂ ಕಾರ್ಮಿಕ ವರ್ಗ ಸಂಪೂರ್ಣ ಸಹಕಾರ ನೀಡಿದೆ. ಇದಕ್ಕಾಗಿ ಇಡೀ ಸಮಾಜ ಅವರಿಗೆ ವಿಶೇಷವಾಗಿ ಕೃತಜ್ಞತೆ ಸಲ್ಲಿಸಬೇಕು ಎಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಯು.ಟಿ.ಖಾದರ್ ಹೇಳಿದ್ದಾರೆ.


ಕಾರ್ಮಿಕರ ದಿನದ ಅಂಗವಾಗಿ ಫರಂಗಿಪೇಟೆ ಮತ್ತು ಮೇರಮಜಲು ಗ್ರಾಮದ 280 ಆಟೋ ರಿಕ್ಷಾ, ಗೂಡ್ಸ್ ವಾಹನ ಹಾಗೂ ಪ್ರವಾಸಿ ಕಾರುಗಳ ಚಾಲಕರಿಗೆ ವೈಯಕ್ತಿಕ ಖರ್ಚಿನಲ್ಲಿ ಶುಕ್ರವಾರ ಫರಂಗಿಪೇಟೆಯಲ್ಲಿ ಆಹಾರ ಸಮಾಗ್ರಿ ಹಾಗೂ ತರಕಾರಿ ಕಿಟ್‍ಗಳನ್ನು ವಿತರಿಸಿ ಅವರು ಮಾತನಾಡಿದರು.

ಜಾಹೀರಾತು

ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರು, ಆಟೋ ರಿಕ್ಷಾ, ಗೂಡ್ಸ್ ವಾಹನ, ಪ್ರವಾಸಿ ಕಾರುಗಳ ಚಾಲಕರ ಕೊಡುಗೆ ಅಪಾರವಾಗಿದೆ. ವರ್ಷ ಪೂರ್ತಿ ಬೆವರು ಸುರಿಸಿ ಅವರು ಪಡುವ ಶ್ರಮದಿಂದ ದೇಶ ಅಭಿವೃದ್ಧಿಯಾಗುತ್ತಿದೆ. ಆದರೆ ದೇಶದ ಅಭಿವೃದ್ಧಿಯಲ್ಲಿ ಅವರ ಪಾತ್ರ ಸಮಾಜಕ್ಕೆ ಕಾಣುತ್ತಿಲ್ಲ. ಎಲ್ಲಾ ಕಾರ್ಮಿಕ ವರ್ಗದವರಿಗೆ ಕಾರ್ಮಿಕ ದಿನದ ಶುಭಾಷಯಗಳು ಎಂದು ಹೇಳಿದರು.

ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಸರಕಾರ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿವೆ. ಆದರೆ ಸರಕಾರದ ಯಾವುದೇ ಕಾರ್ಯಕ್ರಮಗಳು ಕಾರ್ಮಿಕರಿಗೆ ತಲುಪುತ್ತಿಲ್ಲ. ಇಂದು ಕಾರ್ಮಿಕರು ಭಾರೀ ಸಂಕಷ್ಟದಲ್ಲಿ ಇದ್ದು ಕಾರ್ಮಿಕರ ಎಲ್ಲಾ ಸವಲತ್ತುಗಳನ್ನು ಕಾರ್ಮಿಕರಿಗೆ ತಲುಪಿಸುವ ಕೆಲಸವನ್ನು ಸರಕಾರ ಕೂಡಲೇ ಮಾಡಬೇಕು. ಕಾರ್ಮಿಕರ ಕುಟುಂಬಗಳು ಸ್ವಾಭಿಮಾನದಿಂದ ಜೀವನ ನಡೆಸಲು ಸರಕಾರ ಅನುವು ಮಾಡಿಕೊಡಬೇಕು ಎಂದು ಅವರು ಆಗ್ರಹಿಸಿದರು.

ಜಾಹೀರಾತು

ಲಾಕ್‍ಡೌನ್‍ನಿಂದ ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಸರಕಾರ ಸ್ಪಂದಿಸಬೇಕು. ಕರ್ನಾಟಕ ಸರಕಾರ ಕಾರ್ಮಿಕರು, ಆಟೋ ರಿಕ್ಷಾ, ಗೂಡ್ಸ್ ವಾಹನ, ಪ್ರವಾಸಿ ಕಾರುಗಳ ಚಾಲಕರಿಗೆ ಕೇರಳ ಸರಕಾರದ ಮಾದರಿಯಲ್ಲಿ ಭತ್ಯೆ ನೀಡಬೇಕು. ಕಾರ್ಮಿಕರಿಗೆ ಭತ್ಯೆ ನೀಡುವುದು ಕೇರಳದಲ್ಲಿ ಸಾಧ್ಯವಾಗುವುದಾದರೆ ನಮ್ಮ ರಾಜ್ಯದಲ್ಲಿ ಯಾಕೆ ಸಾಧ್ಯವಾಗುವುದಿಲ್ಲ ಎಂದು ಪ್ರಶ್ನಿಸಿದ ಯು.ಟಿ.ಖಾದರ್, ಕಾರ್ಮಿಕರ ಸಂಕಷ್ಟಗಳಿಗೆ ಸ್ಪಂದಿಸುವ ಮೂಲಕ ಸರಕಾರ ಕಾರ್ಮಿಕ ದಿನಾಚರಣೆಯನ್ನು ಆಚರಿಸಬೇಕು ಎಂದರು.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಉಮರ್ ಫಾರೂಕ್ , ಮಾಜಿ ತಾಲೂಕು ಪಂಚಾಯತ್ ಸದಸ್ಯ ಆಸೀಫ್ ಇಕ್ಬಲ್ ದರ್ಬಾರ್, ಪುದು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಉಪಾಧ್ಯಕ್ಷರಾದ ಲೀಡಿಯೋ ಪಿಂಟೋ, ಸದಸ್ಯರಾದ ಇಕ್ಬಲ್ ಸುಜೀರ್ ಜಾಹಿರ್ ಅಬ್ಬಾಸ್,  ರಿಯಾಜ್ ಕುಂಪನಮಜಲ್,  ಮೋನು ಫರಂಗಿಪೇಟೆ ವಲಯ ಅಧ್ಯಕ್ಷ ರಫೀಕ್ ಪೇರಿಮಾರ್ ಸಹಿತ ಪ್ರಮುಖರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ