ಮಾಜಿ ಸಚಿವ ಬಿ.ರಮಾನಾಥ ರೈ ಅವರು ಬಂಟ್ವಾಳ ಕ್ಷೇತ್ರ ವ್ಯಾಪ್ತಿಯ ಸಜೀಪಮುನ್ನೂರು, ಮಾಣಿ, ಗೋಳ್ತಮಜಲು, ಕೊಳ್ನಾಡು ಜಿಪಂ ಕ್ಷೇತ್ರಗಳ ಆಶಾ ಕಾರ್ಯಕರ್ತೆಯರಿಗೆ ಶನಿವಾರ ಗೌರವಾರ್ಪಣೆ ಮಾಡಿದರು.
ಊರಿನ ಜನರಲ್ಲಿ ಕೊವಿಂಡ್ 19 ಬಗ್ಗೆ ಜಾಗೃತಿ ಮೂಡಿಸಿ ಗ್ರಾಮದ ಆರೋಗ್ಯಕ್ಕಾಗಿ ದುಡಿಯುತ್ತಿರುವ ಆಶಾ ಕಾರ್ಯಕರ್ತರಿಗೆ ದಿನ ಬಳಕೆ ಸಾಮಗ್ರಿಳನ್ನು ನೀಡಿ ಗೌರವಿಸಿದರು. ಈ ಸಂದರ್ಭ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್. ಮೊಹಮ್ಮದ್, ಮಂಜುಳಾ ಮಾಧವ ಮಾವೆ, ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಎ.ಪಿ.ಎಂ.ಸಿ ಅಧ್ಯಕ್ಷರಾದ ಪದ್ಮನಾಭ ರೈ, ತಾಲೂಕು ಪಂಚಾಯತ್ ಸದಸ್ಯರಾದ ಮಂಜುಳಾ ಕುಶಲ, ಕೊಳ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Be the first to comment on "ಆಶಾ ಕಾರ್ಯಕರ್ತೆಯರಿಗೆ ಮಾಜಿ ಸಚಿವ ರೈ ಅವರಿಂದ ಗೌರವಾರ್ಪಣೆ"