ಕೊರೊನಾ ಪಾಸಿಟಿವ್ ಪ್ರಕರಣ ಕಂಡುಬಂದ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಶನಿವಾರ ಬಂಟ್ವಾಳ ಪುರಸಭೆಯಲ್ಲಿ ಅಧಿಕಾರಿಗಳ ಸಭೆ ಕರೆದು ಚರ್ಚಿಸಿದರು.
ಬಂಟ್ವಾಳ ಪೇಟೆಯಲ್ಲಿ ಕೊರೊನಾ ಪ್ರಕರಣದ ಬಳಿಕ ಸೀಲ್ ಡೌನ್ ಮುಂದುವರಿದಿದ್ದು ಪರಿಸ್ಥಿತಿಯ ಬಗ್ಗೆ ತಿಳಿದುಕೊಂಡರು.
ಸೋಮವಾರ ಕಂಟೈನ್ ಮೆಂಟ್ ವ್ಯಾಪ್ತಿಯ ಎಲ್ಲ ಮನೆಗಳಿಗೆ ಅವಶ್ಯಕ ದಿನಸಿ ಸಾಮಾಗ್ರಿ ಪೂರೈಸುವುದಾಗಿ ತಿಳಿಸಿ ಅಧಿಕಾರಿ ವರ್ಗ ಅಲ್ಲಿನ ಜನರ ಸಮಸ್ಯೆಗೆ ಸ್ಪಂದಿಸುವಂತೆ ಸೂಚಿಸಿದರು.
ಕುಡಿಯುವ ನೀರಿನ ಸಮರ್ಪಕ ವಿತರಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮತ್ತು ದುರಸ್ತಿ ಕಾರ್ಯಕ್ಕೆ ತಕ್ಷಣ ಕ್ರಮ ವಹಿಸುವಂತೆ ಶಾಸಕರು ತಿಳಿಸಿದರು.
ಸಭೆಯಲ್ಲಿ ಬಂಟ್ವಾಳ ತಹಶೀಲ್ದಾರ್ ರಶ್ಮಿ.ಎಸ್.ಆರ್, ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಾ ಪ್ರಭು, ಬಂಟ್ವಾಳ ನಗರ ಠಾಣೆಯ ಉಪನಿರೀಕ್ಷಕ ಅವಿನಾಶ್, ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ, ಬೂಡಾ ಅಧ್ಯಕ್ಷ ದೇವದಾಸ್ ಶೆಟ್ಟಿ , ಇಂಜಿನಿಯರ್ ಡೊಮಿನಿಕ್ ಡಿ’ ಮೆಲ್ಲೋ ಹಾಗೂ ಪುರಸಭೆಯ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Be the first to comment on "ಕೊರೊನಾ ಕೇಸ್ ಹೆಚ್ಚಳ: ಬಂಟ್ವಾಳ ಪುರಸಭೆಯಲ್ಲಿ ಅಧಿಕಾರಿಗಳೊಂದಿಗೆ ಶಾಸಕ ರಾಜೇಶ್ ನಾಯ್ಕ್ ಸಭೆ"