ವೆನ್ಲಾಕ್ ಆಸ್ಪತ್ರೆ ವರದಿಯಂತೆ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಒಟ್ಟು 10 ಕೋವಿಡ್ ರೋಗಿಗಳು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಅದರಲ್ಲಿ 8 ರೋಗಿಗಳ ಸ್ಥಿತಿ ತೃಪ್ತಿಕರವಾಗಿದೆ. ಕುಲಶೇಖರ ನಿವಾಸಿ 80 ವರ್ಷದ ಮಹಿಳೆ ಅಧಿಕ ರಕ್ತದೊತ್ತಡ, ಪಾರ್ಶ್ವವಾಯುವಿನಿಂದ ಬಳಲುತ್ತಿದ್ದು, ಆರೋಗ್ಯ ಸ್ಥಿತಿ ನಾಜೂಕಾಗಿದೆ. ಬೋಳೂರು ನಿವಾಸಿ 58 ವರ್ಷದ ಮಹಿಳೆ ಮೆದುಳಿನ ಸೋಂಕಿನಿಂದ ಬಳಲುತ್ತಿದ್ದು, ಐಸಿಯುನಲ್ಲಿ ಕೋವಿಡ್ ಚಿಕಿತ್ಸೆ ಪಡೆಯುತ್ತಿದ್ದು, ಆಮ್ಲಜನಕ ನೀಡಲಾಗುತ್ತಿದ್ದು, ಆರೋಗ್ಯ ಸ್ಥಿತಿ ನಾಜೂಕಾಗಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಪ್ರಕಟಣೆಯಲ್ಲಿ ನೀಡಿರುವ ಮಾಹಿತಿ ಹೀಗಿದೆ.
ಸುರತ್ಕಲ್ ನ ಎನ್.ಐ.ಟಿ.ಕೆ.ಯಲ್ಲಿ 28, ಮಂಗಳೂರಿನ ಇಎಸ್ ಐ ಆಸ್ಪತ್ರೆಯಲ್ಲಿ 40 ಮಂದಿ ಕ್ವಾರಂಟೈನ್ ನಲ್ಲಿದ್ದಾರೆ. ಇದುವರೆಗೆ 3779 ಮಂದಿಯ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆಂದು ಕಳುಹಿಸಲಾಗಿದೆ. ಅವುಗಳ ಪೈಕಿ 3611 ಮಂದಿಯ ಪರೀಕ್ಷಾ ವರದಿ ದೊರಕಿದ್ದು, 3585 ನೆಗೆಟಿವ್ ಆಗಿದೆ. 25 ಪಾಸಿಟಿವ್ ಪ್ರಕರಣಗಳು ಜಿಲ್ಲೆಯಲ್ಲಿ ದಾಖಲಾಗಿವೆ. ಇವರ ಪೈಕಿ 6 ಮಂದಿ ಹೊರಜಿಲ್ಲೆ, ರಾಜ್ಯದವರು. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ 19 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಮಂಗಳವಾರ ಹೊಸ ಪ್ರಕರಣ ದಾಖಲಾಗಿದೆ. ಒಟ್ಟು ಮೂವರು ಮೃತಪಟ್ಟಿದ್ದು, 10 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಡಿಸ್ಚಾರ್ಜ್ ಆಗಿದ್ದಾರೆ. ಮಂಗಳವಾರ 26 ಮಂದಿಯ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆಂದು ಕಳುಹಿಸಲಾಗಿದೆ.
ಮಂಗಳವಾರ 393 ಮಂದಿಯ ಪರೀಕ್ಷಾ ವರದಿ ಬಂದಿದ್ದು, 1 ಪಾಸಿಟಿವ್ ಆಗಿದೆ. ಒಟ್ಟು 168 ಮಂದಿಯ ಸ್ಯಾಂಪಲ್ ಪರೀಕ್ಷಾ ವರದಿ ಬರಲು ಬಾಕಿ ಇದೆ ಎಂದವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
for more news join this group
https://chat.whatsapp.com/GX45mPIvBYmC0f8LI6Ytsf