ಉತ್ತರ ಕರ್ನಾಟಕ ಮತ್ತು ಉತ್ತರ ಭಾರತದ ಕಾರ್ಮಿಕರು ಲಾಕ್ ಡೌನ್ ನಿಂದ ಊರಿಗೆ ಮರಳಲಾಗದ ಸನ್ನಿವೇಶ ನಿರ್ಮಾಣವಾದ ಪರಿಸ್ಥಿತಿ ಹಾಗೂ ಈ ಬಗ್ಗೆ ಯಾರನ್ನು ಸಂಪರ್ಕಿಸುವುದು ಎಂಬ ಗೊಂದಲದಲ್ಲಿ ಕಚೇರಿಗಳನ್ನು ಸುತ್ತಿದವರಲ್ಲಿ ಕೆಲವರು ಮಾಜಿ ಸಚಿವ ಬಿ.ರಮಾನಾಥ ರೈ ಅವರ ಬಳಿ ಅಳಲು ತೋಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುವಾರ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ಅವರನ್ನು ಸಂಪರ್ಕಿಸಿದ ರೈ, ಕಾರ್ಮಿಕರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದಾಗ ಸ್ಪಂದಿಸಿದ ತಹಸೀಲ್ದಾರ್, ಉತ್ತರ ಕರ್ನಾಟಕ ಭಾಗದ ಕಾರ್ಮಿಕರ ಕಳುಹಿಸಲು ಬಸ್ ವ್ಯವಸ್ಥೆ ಮತ್ತು ಉತ್ತರ ಭಾರತ ಕಾರ್ಮಿಕರು ಊರಿಗೆ ಹೋಗುವವರೆಗೆ ಅವರಿಗೆ ಪಡಿತರ ಸಾಮಗ್ರಿ ವಿತರಿಸಲು ಕ್ರಮ ಕೈಗೊಳ್ಳಲಾಯಿತು.
ದೂರಿನ ಮೇರೆ ಮಾಜಿ ಸಚಿವ ಬಿ. ರಮಾನಾಥ ರೈ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಮಿಕರೊಂದಿಗೆ ಗುರುವಾರ ಬೆಳಿಗ್ಗೆ ಬಿ.ಸಿ.ರೋಡಿನ ಮಿನಿ ವಿಧಾನ ಸೌಧಕ್ಕೆ ಆಗಮಿಸಿ ರಾಜ್ಯದೊಳಗಿನ ಕಾರ್ಮಿಕರನ್ನು ಊರಿಗೆ ಕಳುಹಿಸಲು ಹಾಗೂ ಉತ್ತರ ಪ್ರದೇಶದ ಕಾರ್ಮಿಕರಿಗೆ ಊರಿಗೆ ಹೋಗುವ ವರೆಗೆ ಅವರಿಗೆ ಪಡಿತರ ನೀಡುವಂತೆ ವಿನಂತಿಕೊಂಡರು. ಈ ಹಿನ್ನಲೆಯಲ್ಲಿ ಗುರುವಾರವೇ ಬಸ್ಸಿನಲ್ಲಿ ರಾಜ್ಯದೊಳಗಿನ ಕಾರ್ಮಿಕರನ್ನು ಕಳುಹಿಸಿ ಕೊಡುವುದಾಗಿ ಹಾಗೂ ಉತ್ತರ ಪ್ರದೇಶದ ಕಾರ್ಮಿಕರಿಗೆ ಪಡಿತರ ಸಾಮಾಗ್ರಿ ನೀಡುವುದಾಗಿ ತಹಶೀಲ್ದಾರ್ ರಶ್ಮಿ ಎಸ್. ಆರ್ ತಿಳಿಸಿದರು. ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್ ಮತ್ತು ಸುದೀಪ್ ಕುಮಾರ್ ಶೆಟ್ಟಿ, ಪುರಸಭಾ ಸದಸ್ಯ ಸಿದ್ದಿಕ್ ಗುಡ್ಡೆಯಂಗಡಿ, ಪ್ರಮುಖರಾದ ವೆಂಕಪ್ಪ ಪೂಜಾರಿ,, ಡೆಂಝಿಲ್ ನೊರೊನ್ಹಾ, ಮೆಲ್ವಿನ್ ಮತ್ತಿತರರು ಉಪಸ್ಥಿತರಿದ್ದರು.