ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶುಕ್ರವಾರ ಸಂಜೆ ಹೊರಡಿಸಿದ ಪ್ರಕಟಣೆಯ ವಿವರ ಹೀಗಿದೆ.
ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಒಟ್ಟು 12 ಕೋವಿಡ್ ರೋಗಿಗಳು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಅವರಲ್ಲಿ 10 ಮಂದಿಯ ಸ್ಥಿತಿ ತೃಪ್ತಿಕರವಾಗಿರುತ್ತದೆ. ಕುಲಶೇಖರ ನಿವಾಸಿ 80 ವರ್ಷದ ವೃದ್ಧೆ ಅಧಿಕ ರಕ್ತದೊತ್ತಡ ಹಾಗೂ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದು, ಆರೋಗ್ಯ ಸ್ಥಿತಿ ನಾಜೂಕಾಗಿರುತ್ತದೆ. ಬೋಳೂರು ನಿವಾಸಿ 58ವರ್ಷದ ಮಹಿಳೆ ಮೆದುಳಿನ ಸೋಂಕಿನಿಂದ ಬಳಲುತ್ತಿದ್ದು, ಐಸಿಯುನಲ್ಲಿ ಕೋವಿಡ್ ಚಿಕಿತ್ಸೆ ಪಡೆಯುತ್ತಿದ್ದು, ವೆಂಟಿಲೇಟರ್ ಅಳವಡಿಸಲಾಗುತ್ತಿದ್ದು, ಆರೋಗ್ಯದ ಸ್ಥಿತಿ ಗಂಭೀರವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು (ಮೇ.8) 31 ಮಂದಿಯನ್ನು ನಿಗಾದಲ್ಲಿ ಇರಿಸಲಾಗಿದೆ. ಒಟ್ಟು 293 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರಲು ಬಾಕಿ ಇದೆ. ಇಂದು ಬಂದ 123 ವರದಿಗಳೆಲ್ಲವೂ ನೆಗೆಟಿವ್ ಆಗಿದೆ. ಇಂದು 90 ಮಂದಿಯ ಸ್ಯಾಂಪಲ್ ಕಳುಹಿಸಲಾಗಿದೆ. ಶುಕ್ರವಾರ 17 ಮಂದಿಗೆ ಉಸಿರಾಟದ ತೊಂದರೆ ಇರುವುದು ಗೊತ್ತಾಗಿದೆ.
ಒಟ್ಟು 28 ಪಾಸಿಟಿವ್ ಕೇಸುಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂದಿದೆ. ಅವರ ಪೈಕಿ 1 ಭಟ್ಕಳ, 1 ಉಡುಪಿ, 4 ಕೇರಳದವರಾಗಿದ್ದು, 22 ಮಂದಿ ಜಿಲ್ಲೆಯವರು. 13 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದೆ. 12 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 3 ಮಂದಿ ಸಾವನ್ನಪ್ಪಿದ್ದಾರೆ.