ಬಂಟ್ವಾಳ

ರಸ್ತೆ ಕಾಮಗಾರಿ ಸಂದರ್ಭ ತೊಂದರೆ: ಶಾಸಕ ರಾಜೇಶ್ ನಾಯ್ಕ್ ಪರಿಶೀಲನೆ, ತೊಂದರೆಯಾಗದಂತೆ ಕೆಲಸ ನಿರ್ವಹಿಸಲು ಸೂಚನೆ

ಬಂಟ್ವಾಳ ಬೈಪಾಸು ಬಳಿ ರಸ್ತೆ ಕಾಮಗಾರಿ ನಡೆಯುತ್ತಿರುವ ಸಂದರ್ಭ ಸ್ಥಳೀಯರಿಗೆ ತೊಂದರೆಯಾಗದಂತೆ ಕೆಲಸ ನಿರ್ವಹಿಸಲು ಶಾಸಕ ರಾಜೇಶ್ ನಾಯ್ಕ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬಂಟ್ವಾಳ ಬೈಪಾಸು ಬಳಿ ಚತುಷ್ಪಥ ಹೆದ್ದಾರಿ ಅಗಲಗೊಳಿಸುವ ಕಾಮಗಾರಿ ನಡೆಯುತ್ತಿದ್ದು, ಈ ಪ್ರದೇಶದಲ್ಲಿ ಬಿ.ಸಿ.ರೋಡು ಮತ್ತು ಪಾಣೆಮಂಗಳೂರಿಗೆ ನೀರು ಸರಬರಾಜು ಮಾಡುವ ಮುಖ್ಯ ಕೊಳವೆಯು ತುಂಡಾಗಿದ್ದು, ದುರಸ್ತಿ ಕಾರ್ಯ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಭೇಟಿ ನೀಡಿ  ಕೊಳವೆ ಶೀಘ್ರ ದುರಸ್ತಿಗೊಳಿಸಿ ನೀರು ಸರಬರಾಜು ವ್ಯವಸ್ಥೆ ಗೊಳಿಸುವಂತೆ ಸೂಚಿಸಿದರು. ಇಂಥ ಪ್ರದೇಶದಲ್ಲಿ ತಡೆಗೋಡೆ ಹಾಗೂ ಚರಂಡಿ ಕಾಮಗಾರಿ ನಡೆಸಿ  ಸ್ಥಳೀಯರಿಗೆ ತೊಂದರೆಯಾಗದ ರೀತಿ ರಸ್ತೆ ಕಾಮಗಾರಿ ನಡೆಸುವಂತೆ ತಿಳಿಸಿದರು. ಈ ಸಂದರ್ಭ ಬುಡಾ ಅಧ್ಯಕ್ಷ  ದೇವದಾಸ ಶೆಟ್ಟಿ, ಪುರಸಭೆ ಸದಸ್ಯ ಹರಿಪ್ರಸಾದ್, ಬೂಡ ಸದಸ್ಯ ಬಾಸ್ಕರ ಟೈಲರ್, ಸ್ಥಳೀಯರಾದ ಅರ್ಕಮೆ ನರಸಿಂಹ ಮಯ್ಯ ರಸ್ತೆ ಕಾಮಗಾರಿ ಮೇಲ್ವಿಚಾರಕರು ಉಪಸ್ಥಿತರಿದ್ದರು.

 

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts