ಸೇವಾ ಸಿಂಧು ಪೋರ್ಟಲ್ ಗೆ ಈ ಲಿಂಕ್ ಕ್ಲಿಕ್ ಮಾಡಿರಿ.
https://sevasindhu.karnataka.gov.in/Sevasindhu/Kannada
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದಂತೆ ಆಟೊ ಮತ್ತು ಟ್ಯಾಕ್ಸಿ ಚಾಲಕರಿಗೆ ಒಂದು ಬಾರಿ ಪರಿಹಾರವಾಗಿ 5 ಸಾವಿರ ರೂಗಳನ್ನು ಪಡೆಯಲು ಆಟೊ, ಟ್ಯಾಕ್ಸಿ ಚಾಲಕರು ಪೋಸ್ಟ್ ಆಫೀಸುಗಳ ಎದುರು ಕ್ಯೂ ನಿಂತು ಅರ್ಜಿಗಳನ್ನು ಸಲ್ಲಿಸಲು ಅನಾವಶ್ಯಕವಾಗಿ ಪರಿಶ್ರಮ ಪಡಬೇಕಾಗಿಲ್ಲ ಎಂದು ಇಲಾಖೆ ಹೇಳಿದೆ.
ಪರಿಹಾರಧನ ನೀಡಲು ಅರ್ಜಿಗಳನ್ನು ಆನ್ ಲೈನ್ ನಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ಸ್ವೀಕರಿಸುವ ವ್ಯವಸ್ಥೆ ಮಾಡಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಎಲ್ಲ ಅರ್ಹ ಆಟೊ, ಟ್ಯಾಕ್ಸಿ ಚಾಲಕರಿಗೆ ಪರಿಹಾರಧನವನ್ನು ಅವರ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ. ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯ ಇಲ್ಲ ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷಾ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೇವಾ ಸಿಂಧು ಪೋರ್ಟಲ್ ಗೆ ಈ ಲಿಂಕ್ ಕ್ಲಿಕ್ ಮಾಡಿರಿ.
Be the first to comment on "ಅರ್ಹ ಟ್ಯಾಕ್ಸಿ, ಆಟೊ ಚಾಲಕರೇ ಸಹಾಯಧನಕ್ಕಾಗಿ ಕ್ಯೂ ನಿಲ್ಲಬೇಕಾಗಿಲ್ಲ, ಅರ್ಜಿ ಪಡೆಯುವ ವಿಧಾನಕ್ಕಾಗಿ ಇಲ್ಲಿ ಕ್ಲಿಕ್ ಮಾಡಿರಿ"